ಕಳೆದ ಮೂರು-ನಾಲ್ಕು ದಿನಗಳಿಂದ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರೈತರು ತೀವ್ರ ಹೋರಾಟ ನಡೆಸುತ್ತಿದ್ದಾರೆ. ಇದೀಗ ರೈತರ ಹೋರಾಟ ವಿಭಿನ್ನ ಸ್ವರೂಪ ಪಡೆದುಕೊಂಡಿದ್ದು, ಪಾದಯಾತ್ರೆಯ ಮೂಲಕ ಹುಬ್ಬಳ್ಳಿ ತಲುಪಲು ರೈತರು ಮುಂದಾಗಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಅಣಕು ಅಂತ್ಯಕ್ರಿಯೆ ನಡೆಸುವ ಮೂಲಕ ರೈತ ಹೋರಾಟಗಾರರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ ರೈತರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಅಣಕು ಶವಯಾತ್ರೆ ನಡೆಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟದ ಹಾದಿ ಹಿಡಿದಿರುವ ರೈತರು, ಇದೀಗ ಸರ್ಕಾರದ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ರೈತ ಹೋರಾಟಗಾರರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಅಣಕು ಶವಯಾತ್ರೆ ನಡೆಸಿ, ಅಣಕು ಅಂತ್ಯಕ್ರಿಯೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ತಮ್ಮ ತೀವ್ರ ಅಸಮಾಧಾನವನ್ನು ಹೊರಹಾಕಿದರು. ಕಳೆದ ಮೂರ್ನಾಲ್ಕು ದಿನಗಳಿಂದ ಸುದೀರ್ಘ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ, ರೈತರು ಇದೀಗ ವಿಭಿನ್ನ ರೀತಿಯಲ್ಲಿ ಚಳವಳಿಯನ್ನು ಮುಂದುವರಿಸಿದ್ದು, ಇಲ್ಲಿಂದ ಪಾದಯಾತ್ರೆ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಿ ತಮ್ಮ ಪ್ರತಿಭಟನಾ ಧ್ವನಿಯನ್ನು ಬಲಪಡಿಸಲು ನಿರ್ಧರಿಸಿದ್ದಾರೆ.
