Belagavi

ಹಿರೇಬಾಗೇವಾಡಿಯಲ್ಲಿ ರೈತರ ಆಕ್ರೋಶ – ರಸ್ತೆ ಬಂದ್ ಮಾಡಿ ಬೃಹತ್ ಪ್ರತಿಭಟನೆ!

Share

ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಪಟ್ಟಣದಲ್ಲಿ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ರಸ್ತೆ ಬಂದ್ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.

ಹಿರೇಬಾಗೇವಾಡಿಯ ಬಸವೇಶ್ವರ ಸರ್ಕಲ್‌ನಲ್ಲಿ ರೈತರು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದರು. ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಹಿರೇಬಾಗೇವಾಡಿ ಪಟ್ಟಣದ ಅಂಗಡಿ ವ್ಯಾಪಾರಸ್ಥರು ಕೂಡ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.

ರೈತರ ಬೇಡಿಕೆಗಳಿಗೆ ಬೆಂಬಲವಾಗಿ ವ್ಯಾಪಾರಸ್ಥರು ಬೀದಿಗಿಳಿದಿದ್ದು, ಪಟ್ಟಣದಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡು ಹೋರಾಟಕ್ಕೆ ಮತ್ತಷ್ಟು ಬಲ ಬಂದಿತು. ರೈತರು ಮತ್ತು ವ್ಯಾಪಾರಸ್ಥರು ಒಗ್ಗಟ್ಟಾಗಿ ರಸ್ತೆ ಬಂದ್ ಮಾಡಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದರು. ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡರು, ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ. ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಕಣ್ಮುಚ್ಚಿ ಕುಳಿತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತರ ಹೋರಾಟಕ್ಕೆ ಸ್ಪಂದಿಸದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖಂಡರು, ಸರ್ಕಾರ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಲಿ ಎಂದು ಕಿಡಿಕಾರಿದರು.ರೈತರ ಬೆವರಿನ ಮೇಲೆ ಆಡಳಿತ ನಡೆಸುವ ಸರ್ಕಾರಗಳು ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕು. ರೈತರ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

ಒಟ್ಟಿನಲ್ಲಿ, ಹಿರೇಬಾಗೇವಾಡಿಯಲ್ಲಿ ರೈತರು ಮತ್ತು ವ್ಯಾಪಾರಸ್ಥರು ಒಂದಾಗಿ ನಡೆಸಿದ ರಸ್ತೆ ಬಂದ್ ಪ್ರತಿಭಟನೆ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದು, ರೈತರ ಬೇಡಿಕೆಗಳು ಯಾವಾಗ ಈಡೇರಲಿವೆ ಎಂಬುದನ್ನು ಕಾದು ನೋಡಬೇಕಿದೆ.

Tags:

error: Content is protected !!