ಬೆಳಗಾವಿಯ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಅತ್ಯಂತ ಸಡಗರದಿಂದ ಆಚರಿಸಲಾಯಿತು. ಇದೇ ವೇಳೆ ಶಾಲೆಯ ವರ್ಧಾಪನ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಮುಖಂಡರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.


ಬೆಳಗಾವಿ ಜಿಲ್ಲಾ ಅಂಧಸೇವಾ ಸಂಸ್ಥೆ ಸಂಚಾಲಿತ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಹಾಗೂ ಶಾಲೆಯ ವರ್ಧಾಪನ ದಿನಾಚರಣೆ ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ವಿಜೃಂಭಣೆಯಿಂದ ನೆರವೇರಿತು. ಸಂಸ್ಥೆಯ ಕಾರ್ಯದರ್ಶಿ ಶ್ರೀನಿವಾಸ ಶಿವಣಗಿ ಸ್ವಾಗತಿಸಿದರೆ, ಮುಖ್ಯ ಅತಿಥಿ ಭೂಪೇಂದ್ರ ಪಟೇಲ್ ಪ್ರತಿಮಾ ಪೂಜೆ ನೆರವೇರಿಸಿ ಶಾಲೆಯ ಸಮಾಜಮುಖಿ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಅಧ್ಯಕ್ಷತೆ ವಹಿಸಿದ್ದ ಚಿಂತಾಮಣಿ ಗ್ರಾಮೋಪಾಧ್ಯೆ ಶಾಲೆಯ ಪ್ರಗತಿಯ ವಿವರ ನೀಡಿದರು. ಆರನೇ ತರಗತಿಯ ವಿದ್ಯಾರ್ಥಿನಿ ಮಹಾದೇವಿ ಕಬಾಡರ ತಮ್ಮ ಅನಿಸಿಕೆ ಹಂಚಿಕೊಂಡರು. ಮುಖ್ಯಾಧ್ಯಾಪಕಿ ಅನಿತಾ ಗಾವಡೆ ವಂದಿಸಿದರು ಮತ್ತು ಸ್ಮಿತಾ ಬಿರ್ಜೆ ನಿರೂಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
