hubbali

ಗಾಂಜಾ ಮಾರಾಟ ಪ್ರಕರಣ:

Share

ಗಾಂಜಾ ಮಾರಾಟ ಪ್ರಕರಣದಲ್ಲಿ ಇಬ್ಬರಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ತೀರ್ಪು ನೀಡಿದೆ.

ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗಾಂಜಾ ಸಾಗಾಟ ಮತ್ತು ಅಕ್ರಮ ಮಾರಾಟ ಪ್ರಕರಣ ಇದಾಗಿದೆ.2023 ರ ಏ.9 ರಂದು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿ ಆಟೋರಿಕ್ಷಾದಲ್ಲಿ ಗಾಂಜಾ ಸಾಗಿಸಿ ಅಕ್ರಮವಾಗಿ ಮಾರಾಟ ಮಾಡಲಾಗಿತ್ತಿತ್ತುಮ ಇದರ ಖಚಿತ ಮಾಹಿತಿ ಮೇರೆಗೆ ಮಾರಾಟ ಮಾಡಲು ಬಂದಿದ್ದ
ಬಸವರಾಜ್ ಭಜಂತ್ರಿ, ಶಿವರಾಜ್ ಗಜಕೋಶ ಎಂಬುವವರನ್ನು ಬಂಧಿಸಿ, ಬಂಧಿತರಿಂದ 11,500 ರೂ. ಮೌಲ್ಯದ 1,154 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು.

ಪ್ರಕರಣದ ತನಿಖೆಯನ್ನ ಅಂದಿನ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಪಿಎಸ್‌ಐ ರುದ್ರಪ್ಪ ಗುಡದರಿ ಅವರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು. ವಿಚಾರಣೆಯಲ್ಲಿ ದಾಖಲಾದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಇಬ್ಬರು ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾಗಿ,
ಬಸವರಾಜ್ ಭಜಂತ್ರಿ, ಶಿವರಾಜ್ ಗಜಕೋಶ ಎಂಬುವವರಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.

Tags:

error: Content is protected !!