State

ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀಗಳು ಹಾಗೂ ಡಿಕೆಶಿ ದಂಪತಿ!

Share

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಅಗ್ರಪೂಜೆ ಸಲ್ಲಿಸುವ ಮೂಲಕ ವಿಧ್ಯುಕ್ತ ಚಾಲನೆ ದೊರೆತಿದೆ. ನಾಡಿನೆಲ್ಲೆಡೆ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಕ್ಷಣಕ್ಕೆ
ಗವಿಸಿದ್ದೇಶ್ವರ ಮಹಾಸ್ವಾಮೀಜಿಯವರು – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಸಾಕ್ಷಿಯಾಗಿದ್ದಾರೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಅಗ್ರಪೂಜೆ ಸಲ್ಲಿಸುವ ಮೂಲಕ ವಿಧ್ಯುಕ್ತ ಚಾಲನೆ ದೊರೆತಿದೆ. ಗವಿಸಿದ್ದೇಶ್ವರ ಮಹಾಸ್ವಾಮೀಜಿಯವರು ನಾಡಹಬ್ಬವನ್ನು ಉದ್ಘಾಟಿಸಿ, ದೇವಿಯ ಕೃಪೆಯಿಂದ ನಾಡಿನಲ್ಲಿ ಉತ್ತಮ ಮಳೆ-ಬೆಳೆಯಾಗಿ ಪ್ರತಿಯೊಬ್ಬರ ಬಾಳಿನಲ್ಲೂ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸಿದರು. ಈ ಅಭೂತಪೂರ್ವ ಕ್ಷಣಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಸಾಕ್ಷಿಯಾಗಿದ್ದು, ದಸರಾ ಉದ್ಘಾಟನೆಗೂ ಮುನ್ನವೇ ತಾಯಿ ಚಾಮುಂಡೇಶ್ವರಿಯ ವಿಶೇಷ ದರ್ಶನ ಪಡೆದು, ಗವಿಸಿದ್ದೇಶ್ವರ ಶ್ರೀಗಳ ಆಶೀರ್ವಾದ ಪಡೆದರು. ಇನ್ನು, ಉದ್ಘಾಟನಾ ಕಾರ್ಯಕ್ರಮದ ಸುಗಮ ನಿರ್ವಹಣೆಗಾಗಿ ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಸೂಕ್ತ ಪಾಸ್ ಹೊಂದಿದ್ದವರಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗಿದೆ.

Tags:

error: Content is protected !!