Vijaypura

ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಹಿಳೆಗೆ ಅವಕಾಶ ನೀಡಿ: ಡಾ. ವಿಜಯಲಕ್ಷ್ಮೀ

Share

ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಇತಿಹಾಸದಲ್ಲಿ ಈವರೆಗೆ ಮಹಿಳೆಯೊಬ್ಬರು ರಾಜ್ಯಾಧ್ಯಕ್ಷರಾಗಿಲ್ಲ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯಾಗಿದ್ದು, ಕನ್ನಡ ಭಾಷೆ, ಸಾಹಿತ್ಯ ಹಾಗೂ ಕನ್ನಡ ಶಾಲೆಗಳ ಉಳಿವಿಗೆ ಶ್ರಮಿಸುವುದಾಗಿ ಡಾ. ವಿಜಯಲಕ್ಷ್ಮೀ ಬಾಳೆಕುಂದ್ರಿ ಹೇಳಿದರು. ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕನ್ನಡ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿ ಹೆಚ್ಚಿಸಲು ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿ, ಶಿಕ್ಷಕರ ನೇಮಕಾತಿ ಮಾಡಬೇಕು. ಶಾಲಾ-ಕಾಲೇಜುಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸುವ ಮೂಲಕ ಮಕ್ಕಳಲ್ಲಿ ಕನ್ನಡಾಭಿಮಾನ ಬೆಳೆಸಬೇಕು. ‘ನಮ್ಮ ನಡೆ ಕನ್ನಡ ಶಾಲೆಗಳ ಕಡೆ’ ಎಂಬ ಧ್ಯೇಯವಾಕ್ಯದೊಂದಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.

ವಿದ್ಯಾವತಿ ಅಂಕಲಗಿ ಮಾತನಾಡಿ, ಕನ್ನಡ ನಾಡು-ನುಡಿಯ ಉಳಿವಿಗಾಗಿ ಮಹಿಳೆಯೊಬ್ಬರು ಕಸಾಪ ರಾಜ್ಯಾಧ್ಯಕ್ಷರಾಗುವುದು ಸೂಕ್ತ. ಪ್ರತಿಯೊಬ್ಬರೂ ಮನೆಯಲ್ಲಿ ಕನ್ನಡ ಮಾತನಾಡಿ, ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸುವ ಮೂಲಕ ಭಾಷೆಯ ಬೆಳವಣಿಗೆಗೆ ಸಹಕರಿಸಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಡಾ. ಭುವನೇಶ್ವರಿ ಸಾಸನೂರ, ಪ್ರೀತಿ ಪತ್ತಾರ, ಶಕುಂತಲಾ ಮೋಸಲಗಿ, ಜಯಶ್ರೀ ಕುಲಕರ್ಣಿ, ಉಮಾ ಗಡೇದ, ಸವಿತಾ ಗಲಗಲಿ ಹಾಗೂ ಸರಸ್ವತಿ ಉಪಸ್ಥಿತರಿದ್ದರು.

Tags:

error: Content is protected !!