Savadatti

ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದ ಬದ್ಧ :

Share

ಸವದತ್ತಿ ಯಲ್ಲಮ್ಮ ಎಂದರೆ ಎಲ್ಲರ ಕಷ್ಟಗಳನ್ನು ದೂರಮಾಡುವ ಗ್ಯಾರಂಟಿ ದೇವಿ ಎಂದು ಬಣ್ಣಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದ ಎಲ್ಲಾ ದೇವಾಲಯಗಳಲ್ಲಿರುವ ಚಿನ್ನಾಭರಣಗಳ ಲೆಕ್ಕ ಹಾಕಿ ಅವುಗಳನ್ನು ದೇವರ ಅಲಂಕಾರಕ್ಕಾಗಿ ಮೀಸಲಿಡುವ ವಿಶೇಷ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಉತ್ತರ ಕರ್ನಾಟಕದ ಶಕ್ತಿದೇವತೆ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ನಂತರ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್ ಅವರು ಸವದತ್ತಿ ಯಲ್ಲಮ್ಮ ಎಂದರೆ ಎಲ್ಲರ ಕಷ್ಟಗಳನ್ನು ದೂರಮಾಡುವ ಗ್ಯಾರಂಟಿ ದೇವಿ ಎಂದು ಬಣ್ಣಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದ ಎಲ್ಲಾ ದೇವಾಲಯಗಳಲ್ಲಿರುವ ಚಿನ್ನಾಭರಣಗಳ ಲೆಕ್ಕ ಹಾಕಿ ಅವುಗಳನ್ನು ದೇವರ ಅಲಂಕಾರಕ್ಕಾಗಿ ಮೀಸಲಿಡುವ ವಿಶೇಷ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು. ಭಕ್ತರು ದೇವಿಯನ್ನು ಚಿನ್ನದ ಆಕರ್ಷಣೆಯಲ್ಲಿ ಕಾಣಬೇಕು ಎಂಬ ಉದ್ದೇಶದಿಂದ ಈ ಹೊಸ ಕಾರ್ಯಕ್ರಮ ರೂಪಿಸಲಾಗುತ್ತಿದ್ದು, ಸರ್ಕಾರದ ಹಂತದಲ್ಲಿ ಕ್ಷೇತ್ರ ಹಾಗೂ ಪುರಸಭೆಯ ಅಭಿವೃದ್ಧಿಗೆ ಬದ್ಧತೆ ವ್ಯಕ್ತಪಡಿಸಿದರು.

ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಗುಣಮಟ್ಟದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದರು. ಬೆಳಗಾವಿ ಜಿಲ್ಲೆಯಲ್ಲಿ ಸವದತ್ತಿ ಸೇರಿದಂತೆ ಹಲವು ಪ್ರಸಿದ್ಧ ದೇವಸ್ಥಾನಗಳಿದ್ದು, ಇವುಗಳನ್ನು ಜೋಡಿಸಿ ‘ಟೆಂಪಲ್ ಟೂರಿಸಂ ಕಾರಿಡಾರ್’ ನಿರ್ಮಿಸಿದರೆ ಉತ್ತರ ಕರ್ನಾಟಕದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭಾರಿ ಉತ್ತೇಜನ ಸಿಗಲಿದೆ ಎಂದು ಪ್ರತಿಪಾದಿಸಿದರು.

ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು ಕ್ಷೇತ್ರದಲ್ಲಿ ಅನ್ನ ದಾಸೋಹದ ಜೊತೆಗೆ ‘ಮೇವು ದಾಸೋಹ’ ಭವನ ಹಾಗೂ ಪಾರ್ಕಿಂಗ್ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. 2028ರ ಮೇ ತಿಂಗಳ ಒಳಗಾಗಿ ಎಲ್ಲಾ ಅಭಿವೃದ್ಧಿ ಕಾರ್ಯಗಳು ಉದ್ಘಾಟನೆಗೊಳ್ಳಬೇಕು ಎಂದು ಡಿಕೆಶಿ ಆಶಿಸಿದ್ದು, ಜಿಲ್ಲಾಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕಿದೆ ಎಂದರು. ಇದೇ ವೇಳೆ ಕೇಂದ್ರ ನೀಡಿದ 100 ಕೋಟಿ ರೂ. ಸಾಲವನ್ನು ಅನುದಾನವನ್ನಾಗಿ ಪರಿವರ್ತಿಸಿಕೊಡಲು ಶೆಟ್ಟರ್ ಅವರಿಗೆ ಮನವಿ ಮಾಡಿದರು.

ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ವಿಶ್ವಾಸ್ ವೈದ್ಯ ಅವರು ಮಾತನಾಡಿ, ಕ್ಷೇತ್ರದಲ್ಲಿ ನದಿ ಮತ್ತು ಜಲಾಶಯಗಳಿದ್ದರೂ ನೀರಿನ ಅಭಾವವಿದ್ದು, ಮುಂಬರುವ ಬಜೆಟ್‌ನಲ್ಲಿ ಸವದತ್ತಿ ಹಾಗೂ ಯರಗಟ್ಟಿ ತಾಲೂಕುಗಳ ಕೆರೆ ತುಂಬಿಸುವ ಯೋಜನೆಯನ್ನು ಘೋಷಿಸಬೇಕು ಎಂದು ಮನವಿ ಮಾಡಿದರು. ಜೊತೆಗೆ ಮುನವಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವಂತೆ ಸರ್ಕಾರಕ್ಕೆ ವಿನಂತಿಸಿದರು.

ಈ ವೇಳೆ ರಾಮದುರ್ಗ ಶಾಸಕ ಅಶೋಕ್ ಪಟ್ಟಣ್, ಡಿಸಿ ಮೊಹ್ಮದ್ ರೋಷನ್, ಜಿ.ಪಂ. ಸಿಇಓ ರಾಹುಲ್ ಶಿಂಧೆ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.

Tags:

error: Content is protected !!