Khanapur

ರಾಯಾಪೂರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆ: ಶೈಕ್ಷಣಿಕ ಅಭಿವೃದ್ಧಿಗೆ ಕರೆ!

Share

ಖಾನಾಪೂರ ತಾಲೂಕಿನ ನಂದಗಡ ಸಮೀಪದ ರಾಯಾಪೂರ ವಾಲ್ಮೀಕಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಶ್ರದ್ಧಾ-ಭಕ್ತಿಯಿಂದ ಜರುಗಿತು.

ಖಾನಾಪೂರ ತಾಲೂಕಿನ ನಂದಗಡ ಗ್ರಾಮದ ರಾಯಾಪೂರ ವಾಲ್ಮೀಕಿ ನಗರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ದಿನದ ಅಂಗವಾಗಿ ಸ್ವಾಮೀಜಿಗಳ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಇದೇ ವೇಳೆ, ಖಾನಾಪೂರ-ಹಲಸಿ ಮುಖ್ಯ ರಸ್ತೆಯಲ್ಲಿರುವ ಮಹರ್ಷಿ ವಾಲ್ಮೀಕಿ ನಾಮಫಲಕಕ್ಕೆ ಗ್ರಾಮದ ಗುರು-ಹಿರಿಯರು ಪುಷ್ಪಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಗಣ್ಯರು, “ಮಕ್ಕಳು ಧಾರ್ಮಿಕ ಸಂಸ್ಕಾರಗಳೊಂದಿಗೆ ಶೈಕ್ಷಣಿಕವಾಗಿ ಮುಂದೆ ಬರಬೇಕು” ಎಂದು ಕರೆ ನೀಡಿದರು. ಖಾನಾಪೂರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಬಾಬು ಹತ್ತರವಾಡ ಅವರ ನೇತೃತ್ವದಲ್ಲಿ ನಡೆದ ಈ ಸಂಭ್ರಮದ ಆಚರಣೆಯಲ್ಲಿ ಮಾಜಿ ಗ್ರಾ.ಪಂ ಸದಸ್ಯೆ ಬಸವ್ವ ಹತ್ತರವಾಡ ಸೇರಿದಂತೆ ಊರಿನ ಪ್ರಮುಖರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Tags:

error: Content is protected !!