ಬೆಳಗಾವಿ ಜಿಲ್ಲೆಯ ಐತಿಹಾಸಿಕ ಕಿತ್ತೂರು ನೆಲದಲ್ಲಿ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮಾಜಿಯ ವಿಜಯೋತ್ಸವದ ಅಂಗವಾಗಿ ನಡೆಯುತ್ತಿರುವ ಕಿತ್ತೂರು ಉತ್ಸವಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಹಾಗೂ ನಾಡಗೀತೆ ಮತ್ತು ವಂದೇ ಮಾತರಂ ಗೀತೆಯ ಗಾಯನದೊಂದಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.


ಕರ್ನಾಟಕದ ಪ್ರಮುಖ ರೈತ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ ಅವರು ಜ್ಯೋತಿ ಬೆಳಗಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಹಾಗೂ ನಿಚ್ಚಣಕಿಯ ಪಂಚಾಕ್ಷರಿ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದೇ ವೇಳೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ರಾಮದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ ಪಟ್ಟಣ, ಕಿತ್ತೂರು ಕ್ಷೇತ್ರದ ಶಾಸಕ ಬಾಬಾಸಾಹೇಬ್ ಪಾಟೀಲ್, ಬೈಲಹೊಂಗಲ ಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೇರಿದಂತೆ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಐತಿಹಾಸಿಕ ಕಿತ್ತೂರಿನ ನೆಲದಲ್ಲಿ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ವೀರರಾಣಿ ಕಿತ್ತೂರು ಚೆನ್ನಮ್ಮಾಜಿಯ ಶೌರ್ಯವನ್ನು ಸ್ಮರಿಸುವ ಉತ್ಸವಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ಸಂಭ್ರಮದ ಚಾಲನೆ ದೊರೆಯಿತು.

ಶಾನೂಲ ಮತ್ತೆಖಾನ
ಕಿತ್ತೂರು
