ಬೆಂಗಳೂರಿನ ಜಯನಗರದ ನಾಗನೂರು ಶ್ರೀ ಶಿವಬಸವ ಸ್ವಾಮೀಜಿ ಕಲ್ಯಾಣ ಕೇಂದ್ರದ ನವೀಕೃತ ‘ಗುರುಭವನ’ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು.
ಡಂಬಳ-ಗದಗದ ಎಡೆಯೂರು ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ದಿವ್ಯ ಸಾನಿಧ್ಯ ವಹಿಸಿದ್ದರು. ನಾಗನೂರು ಶ್ರೀ ರುದ್ರಾಕ್ಷಿಮಠದ ಶ್ರೀ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳ ನೇತೃತ್ವದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಸಮಾರಂಭದಲ್ಲಿ ಶಾಸಕರಾದ ಮಹಾಂತ್ರೇಶ ಕೌಜಲಗಿ, ಬಾಬಾಸಾಹೇಬ ಪಾಟೀಲ, ಪ್ರಮುಖರಾದ ಮಹಾಂತೇಶ ಬಿರಾದಾರ, ಕಲ್ಯಾಣ ಕೇಂದ್ರದ ಕಾರ್ಯದರ್ಶಿಗಳಾದ ಶಂಭು ಹಿರೇಮಠ ಸೇರಿದಂತೆ ಹಲವು ಗಣ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು
