Vijaypura

ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾವು

Share

ಬೆಳಗಿನ ಜಾವ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ನಗರದ ಹೊರವಲಯದ ಚಿದಂಬರ ಬಡಾವಣೆಯ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ರಾಜಶೇಖರ ಬಿರಾದಾರ (50) ಎಂದು ಗುರುತಿಸಲಾಗಿದೆ. ಬೆಳಿಗ್ಗೆ ವಾಕಿಂಗ್‌ಗೆ ತೆರಳಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ರಾಜಶೇಖರ ಅವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಕುಟುಂಬಸ್ಥರು ಧಾವಿಸಿದ್ದು, ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನಾ ಸ್ಥಳಕ್ಕೆ ವಿಜಯಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಚಾಲಕನ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ. ಘಟನೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Tags:

error: Content is protected !!