ಚಿಕ್ಕೋಡಿ ತಾಲೂಕಿನ ಸಿದ್ದಾಪೂರವಾಡಿ ಗ್ರಾಮದ ಚಿಕ್ಕೋಡಿ-ಮಿರಜ್ ರಸ್ತೆಯಲ್ಲಿ ಮಹೀಂದ್ರಾ ಥಾರ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ನಲ್ಲಿದ್ದ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿಕ್ಕೋಡಿ-ಮಿರಜ್ ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ನಲ್ಲಿದ್ದ ದಂಪತಿಗಳು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ.
ಸುಧಾಕರ ರೋಕಡೆ (ವಯಸ್ಸು ೪೦),ಸ್ವಪ್ನಾ ರೋಕಡೆ (ವಯಸ್ಸು ೩೪) ಗಾಯಗೊಂಡ ದಂಪತಿ,
ಗಾಯಗೊಂಡ ದಂಪತಿಗಳನ್ನು ತಕ್ಷಣವೇ ಸ್ಥಳೀಯರ ಸಹಾಯದಿಂದ ಚಿಕ್ಕೋಡಿಯ ಕೆ.ಎಲ್.ಇ. (KLE) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರಿಗೆ ತುರ್ತು ಚಿಕಿತ್ಸೆ ಮುಂದುವರಿದಿದೆ.
ಘಟನಾ ಸ್ಥಳಕ್ಕೆ ಅಂಕಲಿ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರೆದಿದೆ.
