Hukkeri

ಮೈಸೂರು ದಸರಾ ಉತ್ಸವಕ್ಕೆ ಹುಕ್ಕೇರಿ ಹಿರೇಮಠದ ಸಂಸ್ಥಾನದ ಶ್ರೀಗಳಿಗೆ ಆಮಂತ್ರಣ

Share

ವಿಶ್ವ ಪ್ರಸಿದ್ಧ ಮೈಸೂರು ದಸರಾ ಉದ್ಘಾಟನಾ ಸಮಾರಂಭಕ್ಕೆ ಬೆಳಗಾವಿ ಹುಕ್ಕೇರಿ ಹಿರೇಮಠ ಸಂಸ್ಥಾನದ ಅಧಿಪತಿಗಳು, ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರೂ ಆಗಿರುವ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಆಶಯದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ಆಮಂತ್ರಣ ಕೊಡಲು ತಮಗೆ ಹೇಳಿರುವುದರಿಂದ ದಸರಾ ಉತ್ಸವಕ್ಕೆ ಆಮಂತ್ರಿಸುತ್ತಿದ್ದೇವೆ ಎಂದು ಬೆಳಗಾವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಶ್ರೀಗಳಿಗೆ ಅಧಿಕೃತ ಆಮಂತ್ರಣ ನೀಡಿ ಮೈಸೂರು ದಸರಾ ಉತ್ಸವಕ್ಕೆ ಆಗಮಿಸಲು ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ಆಮಂತ್ರಣ ಸ್ವೀಕರಿಸಿ ಮಾತನಾಡಿದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು, ಮೈಸೂರು ದಸರಾ ಉತ್ಸವವನ್ನು ಈ ವರ್ಷ ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀ ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟಿಸುತ್ತಿರುವುದು ನಮಗೆ ಅತೀವ ಸಂತೋಷ ತಂದಿದೆ. ಈ ಕಾರ್ಯಕ್ರಮಕ್ಕೆ ನಮಗೆ ಆಮಂತ್ರಿಸಲು ಮುಖ್ಯಮಂತ್ರಿಗಳು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಅಧಿಕೃತವಾಗಿ ಆಮಂತ್ರಣ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳನ್ನು ಕಳುಹಿಸಿರುವುದು ಸಂತಸ ತಂದಿದೆ. ಮೈಸೂರಿನ ಇತಿಹಾಸದಲ್ಲಿ ಎಲ್ಲಾ ಪರಂಪರೆಯ ಸ್ವಾಮೀಜಿಗಳನ್ನು ಆಮಂತ್ರಿಸುವ ಮೂಲಕ ಕರ್ನಾಟಕ ಸಾಧು, ಸಂತರ ನೆಲವು ಏನು ಎನ್ನುವ ಪರಿಚಯಿಸುತ್ತಿರುವ ಮುಖ್ಯಮಂತ್ರಿಗಳ ಕಾರ್ಯವನ್ನು ಶ್ರೀಗಳು ಅಭಿನಂದಿಸಿದರು.

ಹುಕ್ಕೇರಿ ಹಿರೇಮಠದ ದಸರಾ ಉತ್ಸವ ಉತ್ತರ ಕರ್ನಾಟಕದಲ್ಲಿಯೇ ಪ್ರಸಿದ್ಧವಾಗಿರುವುದರಿಂದ ಪ್ರತಿ ವರ್ಷ ದಸರಾ ಉತ್ಸವವನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು ಈ ಸಂದರ್ಭದಲ್ಲಿ ಸಂಸ್ಥಾನದ ಪರಂಪರೆಯಂತೆ ಶ್ರೀ ಮಠದಲ್ಲಿಯೇ ಇರಬೇಕಾಗಿರುವುದರಿಂದ ನಾವು ಉತ್ಸವದಲ್ಲಿ ಪಾಲ್ಗೊಳ್ಳಲು ಆಗುತ್ತಿಲ್ಲ. ಅಲ್ಲದೆ, ಮೂರು ವರ್ಷಗಳ ಹಿಂದೆ ಹುಕ್ಕೇರಿ ಹಿರೇಮಠದ ದಸರಾ ಉತ್ಸವಕ್ಕೆ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಆಗಮಿಸಿದ್ದನ್ನು ಶ್ರೀಗಳು ಸ್ಮರಿಸಿದರು ಮೈಸೂರು ದಸರಾ ನಾಡಿಗೆ ಹೆಸರಾದರೆ ಹುಕ್ಕೇರಿ ದಸರಾ ಭಾವೈಕ್ಯತೆಗೆ ಹೆಸರಾಗಿದೆ ಎನ್ನುವುದನ್ನು ಕೂಡ ಈ ಸಂದರ್ಭದಲ್ಲಿ ದಸರಾ ಉತ್ಸವ ಯಶಸ್ವಿಯಾಗಲಿ ಎಂದರು

Tags:

error: Content is protected !!