Belagavi

ಬೆಳಗಾವಿ APMC ಮಾರುಕಟ್ಟೆಯಲ್ಲಿ ಅವ್ಯವಹಾರ: ಉಪ ಲೋಕಾಯುಕ್ತರಿಗೆ ಸುಜೀತ್ ಮುಳಗುಂದ ದೂರು

Share

ಬೆಳಗಾವಿಯ ಎಪಿಎಂಸಿ ಮಾರುಕಟ್ಟೆಯಲ್ಲಿ ಸಂಡೆ ಮಾರ್ಕೆಟ್ ಹೆಸರಿನಲ್ಲಿ ನಡೆಯುತ್ತಿರುವ ಅನಧಿಕೃತ ಚಟುವಟಿಕೆಗಳು ಹಾಗೂ ಸಾರ್ವಜನಿಕ ಧನ ನಷ್ಟದ ಕುರಿತು ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ಅವರು ಉಪ ಲೋಕಾಯುಕ್ತರಿಗೆ ದೂರು ನೀಡಿದ್ದಾರೆ. APMC ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ಕಾರಿ ರಾಜಸ್ವಕ್ಕೆ ಭಾರಿ ನಷ್ಟವಾಗುತ್ತಿದ್ದು, ಈ ಬಗ್ಗೆ ತಕ್ಷಣವೇ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಬೆಳಗಾವಿ ಎಪಿಎಂಸಿ ಪ್ರಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ಅವರು ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ. ಜೈ ಕಿಸಾನ್ ತರಕಾರಿ ಮಾರುಕಟ್ಟೆಯಿಂದ ಸ್ಥಳಾಂತರಗೊಂಡ ವ್ಯಾಪಾರಿಗಳಿಗೆ ಕೇವಲ ಮೂರು ತಿಂಗಳ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲಾಗಿದ್ದರೂ, ಯಾವುದೇ ಬಾಡಿಗೆ ನೀಡದೆ ಒಂದು ವರ್ಷದಿಂದ ಮುಂದುವರಿದಿರುವುದು ಸಾರ್ವಜನಿಕ ಆದಾಯಕ್ಕೆ ದೊಡ್ಡ ನಷ್ಟ ಉಂಟುಮಾಡಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ, ದೈನಂದಿನ ಮಾರುಕಟ್ಟೆ ಸೆಸ್ ಸರಿಯಾಗಿ ಸಂಗ್ರಹವಾಗುತ್ತಿಲ್ಲದಿರುವುದು ಹಾಗೂ ರೈತರಿಂದ ಅನಧಿಕೃತ ಕಮಿಷನ್ ವಸೂಲಿ ಮಾಡುತ್ತಿರುವ APMC ಅಧಿಕಾರಿಗಳ ಬೇಜವಾಬ್ದಾರಿಯ ವಿರುದ್ಧ ಕಟ್ಟುನಿಟ್ಟಿನ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

Tags:

error: Content is protected !!