Belagavi

ಬೆಳಗಾವಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನೂತನ ಪಾರ್ಕಿಂಗ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Share

ಬೆಳಗಾವಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಡಲಾಗಿದೆ. ನ್ಯಾಯಾಲಯಕ್ಕೆ ಆಗಮಿಸುವ ಸಾರ್ವಜನಿಕರು ಮತ್ತು ವಕೀಲರ ವಾಹನ ನಿಲುಗಡೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಇಂದು ನೂತನ ಪಾರ್ಕಿಂಗ್ ಅಭಿವೃದ್ಧಿ ಕಾಮಗಾರಿಗೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಹಮ್ಮಿಕೊಳ್ಳಲಾಗಿರುವ ನೂತನ ಪಾರ್ಕಿಂಗ್ ಅಭಿವೃದ್ಧಿ ಕಾಮಗಾರಿಗೆ ಇಂದು ಬೆಳಿಗ್ಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ ಹಾಗೂ ಬೆಳಗಾವಿ ವಕೀಲರ ಸಂಘದ ಅಧ್ಯಕ್ಷರಾದ ಬಿ.ಜೆ. ಗಂಗಾಯಿ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಈ ಶುಭಾರಂಭದ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಸಚಿನ್ ಆರ್. ಶಿವಣ್ಣವರ, ಉಪಾಧ್ಯಕ್ಷರಾದ ಪವನ್ ಪಾಟೀಲ್, ವ್ಯವಸ್ಥಾಪಕ ಸಮಿತಿ ಸದಸ್ಯರಾದ ದೀಪಾ ಹಲಪ್ಪಣ್ಣವರ, ಶ್ರೀ ವಸಂತ್ ಅಕ್ಕಣ್ಣವರ ಸೇರಿದಂತೆ ಅನೇಕ ಗಣ್ಯರು ಹಾಗೂ ಹಿರಿಯ-ಕಿರಿಯ ವಕೀಲರು ಉಪಸ್ಥಿತರಿದ್ದರು. ಕಾಮಗಾರಿ ನಡೆಯುವ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸದೆ, ಈ ಸತ್ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ವಕೀಲ ಬಂಧುಗಳಿಗೆ ಹಾಗೂ ಕಕ್ಷಿದಾರರಿಗೆ ಮನವಿ ಮಾಡಲಾಗಿದೆ.

Tags:

error: Content is protected !!