VIJAYNAGAR

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ದುರಂತ ಸಾವು!

Share

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಚಿರತೆಯೊಂದು ಮೃತಪಟ್ಟಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬಣವೀಕಲ್ಲು ಹಾಗೂ ಅಮಲಾಪುರ ಗ್ರಾಮಗಳ ಬಳಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಸಮೀಪದ ಬಣವೀಕಲ್ಲು – ಅಮಲಾಪುರ ಗ್ರಾಮಗಳ ನಡುವೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನವೊಂದು ರಭಸದಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಚಿರತೆ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಕಾನಾಹೊಸಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆದ್ದಾರಿ ಪಕ್ಕದಲ್ಲೇ ಕ್ರೂರ ಮೃಗ ಬಲಿಯಾಗಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದ್ದು, ಚಿರತೆಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನ ಮತ್ತು ಚಾಲಕನ ಪತ್ತೆಗೆ ಅರಣ್ಯ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

Tags:

error: Content is protected !!