hubbali

ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಆಯುಧಗಳಿಂದ ದಾಳಿ

Share

ಹುಬ್ಬಳ್ಳಿ ಬಂಕಾಪುರ ಚೌಕ ಬಳಿಯ ಎಂ.ಡಿ. ಕಾಲೋನಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ತೋಹಿದ್ ಮಿರ್ಜಿ ಹಲ್ಲೆಗೊಳಗಾದ ಯುವಕ. ಆಟೋದಲ್ಲಿ ಬಂದಿದ್ದ ಕೆಲವರು ಆಯುಧಗಳಿಂದ ತೋಹಿದ್ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ವಾಸಿಂ ಹಾಗೂ ಆತನ ಗ್ಯಾಂಗ್‌ನಿಂದ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ತೋಹಿದ್ ಅವರನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಬೆಂಡಿಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆಗೆ ನಿಖರ ಕಾರಣ ಹಾಗೂ ಆರೋಪಿಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags:

error: Content is protected !!