ಮಹಾತ್ಮಾ ಗಾಂಧಿ ಜಯಂತಿಯ ಸಂಭ್ರಮದ ಹಿನ್ನೆಲೆ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಿಎಂ ಡಿ.ಕೆ.ಶಿವಕುಮಾರ್ ಅವರು ಗಾಂಧೀಜಿಯವರ ಆದರ್ಶಗಳು ಎಂದೆಂದಿಗೂ ಅಮರ ಎಂದಿದ್ದಾರೆ. ಇದೇ ವೇಳೆ ಐವತ್ತು ಲಕ್ಷ ಮತದಾರರನ್ನು ಕೈಬಿಡುವ ಷಡ್ಯಂತ್ರದ ಆರೋಪವನ್ನು ಸಾಬೀತುಪಡಿಸಬೇಕು, ಇಲ್ಲವಾದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸವಾಲಿಗೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್, ಬಹಳ ಸಂತೋಷ, ಇದರ ಬಗ್ಗೆ ಕೂಲಂಕಷವಾಗಿ ಮಾತನಾಡೋಣ ಎಂದು ಸವಾಲನ್ನು ಸ್ವೀಕರಿಸಿದರು.



ಇಂದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಲಾಯಿತು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ನಾಯಕರು, ವ್ಯಕ್ತಿ ಮರಣ ಹೊಂದಿದರೂ ವಿಚಾರಗಳು ಎಂದೆಂದಿಗೂ ಮರಣ ಹೊಂದಲು ಸಾಧ್ಯವಿಲ್ಲ ಎಂಬುದಕ್ಕೆ ಗಾಂಧೀಜಿಯವರ ಆದರ್ಶಮಯ ಬದುಕು ಇಡೀ ದೇಶ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲೂ ದೊಡ್ಡ ಸ್ಫೂರ್ತಿಯಾಗಿದೆ ಎಂದು ಬಣ್ಣಿಸಿದರು. ನೂರಾ ಒಂದು ವರ್ಷದ ಹಿಂದೆ ಈ ದೇಶದ ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿಕೊಂಡು ಸ್ವಾತಂತ್ರ್ಯವನ್ನು ತಂದುಕೊಡಲಾಗಿದೆ. ಇಂದು ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿದ್ದು, ಪ್ರತಿ ಹಂತದಲ್ಲೂ ಅವರು ಮಾಡಿದ ತ್ಯಾಗ ಹಾಗೂ ಮಾರ್ಗದರ್ಶನ ಎಲ್ಲರಿಗೂ ದಾರಿದೀಪವಾಗಿದೆ ಎಂದು ನುಡಿದರು. ಕಾಂಗ್ರೆಸಿಗರು ಯಾವಾಗಲೂ ಗಾಂಧೀಜಿಯವರ ಚಿಂತನೆ ಮತ್ತು ವಿಚಾರಗಳಡಿಯಲ್ಲಿಯೇ ಎಲ್ಲಾ ನಿರ್ಣಯಗಳನ್ನು ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ವೇಳೆ ಐವತ್ತು ಲಕ್ಷ ಮತದಾರರನ್ನು ಕೈಬಿಡುವ ಷಡ್ಯಂತ್ರದ ಆರೋಪವನ್ನು ಸಾಬೀತುಪಡಿಸಬೇಕು, ಇಲ್ಲವಾದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸವಾಲಿಗೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್, ಬಹಳ ಸಂತೋಷ, ಇದರ ಬಗ್ಗೆ ಕೂಲಂಕಷವಾಗಿ ಮಾತನಾಡೋಣ ಎಂದು ಸವಾಲನ್ನು ಸ್ವೀಕರಿಸಿದರು. ಬಿಜೆಪಿಯವರ ತಂತ್ರ, ಕುತಂತ್ರ ಹಾಗೂ ಮಂತ್ರ ಎಲ್ಲವನ್ನೂ ಸಾರ್ವಜನಿಕವಾಗಿ ಬಿಚ್ಚಿಡುತ್ತೇವೆ. ಎಲೆಕ್ಷನ್ ಕಮಿಷನ್ ನವರು ದಡ್ಡರಲ್ಲ, ಮುಂಬರುವ ದಿನಗಳಲ್ಲಿ ಸತ್ಯವೆಲ್ಲವೂ ಬೆಳಕಿಗೆ ಬರಲಿದೆ ಎಂದರು. ವಿರೋಧ ಪಕ್ಷದವರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕುರುಡಾಗಿ ರಾಜಕಾರಣ ಮಾಡುತ್ತಿದ್ದಾರೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದರು.
