Belagavi

ಸಿಎಂ ಸಮ್ಮುಖದಲ್ಲಿ ಸಕ್ಕರೆ ಕಾರ್ಖಾನೆಗಳ ಸಭೆ: ರೈತರು-ಉದ್ಯಮಿಗಳ ಹಿತರಕ್ಷಣೆಗೆ ಚರ್ಚೆ – ಸಂಗಮೇಶ ನಿರಾಣಿ

Share

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ. ರೈತರು, ಸಕ್ಕರೆ ಕಾರ್ಖಾನೆಗಳು ಹಾಗೂ ಸರ್ಕಾರದ ನಡುವೆ ಸಮನ್ವಯತೆ ಕಾಪಾಡುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಸಕ್ಕರೆ ಉದ್ಯಮಿ ಸಂಗಮೇಶ ನಿರಾಣಿ ತಿಳಿಸಿದ್ದಾರೆ.

ಸೋಮವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರಿ. ರೈತರು ಹಾಗೂ ಸಕ್ಕರೆ ಕಾರ್ಖಾನೆಗಳ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಹಲವು ಪ್ರಮುಖ ವಿಚಾರಗಳನ್ನು ಮುಖ್ಯಮಂತ್ರಿ ಸಭೆಯಲ್ಲಿ ಚರ್ಚಿಸಲಾಗಿದೆ. ರೈತರು ಮತ್ತು ಕಾರ್ಖಾನೆಗಳು ಎರಡೂ ಉಳಿಯುವಂತಹ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ನಡೆದಿದೆ ಎಂದರು.
ಇನ್ನೂ ಕೆಲವು ವಿಚಾರಗಳ ಕುರಿತು ಚರ್ಚೆ ನಡೆಸಬೇಕಿರುವುದರಿಂದ ಸಂಜೆ ಮತ್ತೊಮ್ಮೆ ಸಭೆ ನಡೆಯಲಿದೆ. ಸಂಜೆ ನಡೆಯುವ ಸಭೆಯಲ್ಲಿ ಸಮಸ್ಯೆಗಳಿಗೆ ಪರಿಹಾರ ದೊರೆಯುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tags:

error: Content is protected !!