ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರ 63ನೇ ಹುಟ್ಟುಹಬ್ಬದ ಅಂಗವಾಗಿ ವಿಜಯಪುರ ಸೈಕ್ಲಿಂಗ್ ಗ್ರೂಪ್, ಕೋಟಿ ವೃಕ್ಷ ಅಭಿಯಾನ ಹಾಗೂ ಅರಣ್ಯ ಇಲಾಖೆ ವತಿಯಿಂದ ಪರಿಸರ ಸ್ನೇಹಿ ಕಾರ್ಯಕ್ರಮ ಆಯೋಜಿಸಲಾಯಿತು. ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿಗಳು ಭಾಗವಹಿಸಿದ್ದರು. ಹುಟ್ಟುಹಬ್ಬದ ಸ್ಮರಣಾರ್ಥವಾಗಿ 63 ಸಸಿಗಳನ್ನು ನೆಡುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಪರಿಸರ ಸಂರಕ್ಷಣೆ ಹಾಗೂ ಹಸಿರು ವಿಜಯಪುರ ನಿರ್ಮಾಣದ ಸಂದೇಶ ಸಾರುವ ಉದ್ದೇಶದಿಂದ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಈ ಸಂದರ್ಭದಲ್ಲಿ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರು, ಕೋಟಿ ವೃಕ್ಷ ಅಭಿಯಾನದ ಕಾರ್ಯಕರ್ತರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿ ಸಸಿ ನೆಟ್ಟು, ಅವುಗಳ ಸಂರಕ್ಷಣೆಗೆ ಸಂಕಲ್ಪ ಮಾಡಿದರು.
