Vijaypura

ಚಾಲಕನ ನಿಯಂತ್ರಣ ತಪ್ಪಿ ಆಯಿಲ್ ಟ್ಯಾಂಕರ್ ಪಲ್ಟಿ; ಆಯಿಲ್‌ಗಾಗಿ ಮುಗಿಬಿದ್ದ ಜನ!

Share

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹೊರ್ತಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿಯಾಗಿದೆ.

ಟ್ಯಾಂಕರ್ ಪಲ್ಟಿಯಾಗುತ್ತಿದ್ದಂತೆ ಸುತ್ತಮುತ್ತಲಿನ ಸಾರ್ವಜನಿಕರು ಆಯಿಲ್ ತುಂಬಿಕೊಳ್ಳಲು ಸ್ಥಳಕ್ಕೆ ಧಾವಿಸಿದ್ದಾರೆ. ಕೈಯಲ್ಲಿ ಕೊಡ ಹಿಡಿದುಕೊಂಡು ಮಹಿಳೆಯರು, ಪುರುಷರು ಸೇರಿದಂತೆ ಹಲವರು ಸ್ಥಳಕ್ಕೆ ಬಂದಿದ್ದಾರೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆ ಹೊರ್ತಿ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:

error: Content is protected !!