hubbali

ಪೊಲೀಸ್ ಹುತಾತ್ಮರ ದಿನಾಚರಣೆ: ನ್ಯಾಯಾಧೀಶರಿಂದ ಗೌರವ ಸಮರ್ಪಣೆ

Share

ಗಡಿಯಲ್ಲಿ ದೇಶ ಕಾಯುವ ಯೋಧರಂತೆ, ನಾಡಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರು ಕೂಡ ಸಮಾಜದಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ಕರ್ತವ್ಯದ ವೇಳೆಯಲ್ಲಿ ಹುತಾತ್ಮರಾದ ಪೊಲೀಸರಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ವಿಶೇಷ ಗೌರವ ಸಮರ್ಪಣೆ ಮಾಡಲಾಯಿತು.

ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್‌ ಆಯುಕ್ತಾಲಯದ ನೇತೃತ್ವದಲ್ಲಿ ಹುಬ್ಬಳ್ಳಿಯ ಸಿಎಆ‌ರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್‌.ವಿ.ವಿಜಯ್ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹೌದು.. ಕರ್ತವ್ಯದ ವೇಳೆಯಲ್ಲಿ ಹಾಗೂ ಸೇವೆಯಲ್ಲಿರುವಾಗ ಹುತಾತ್ಮರಾದ ಪೊಲೀಸರಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಹುತಾತ್ಮರ ದಿನಾಚರಣೆ ಆಚರಿಸಲಾಯಿತು. ಪೊಲೀಸ್ ತುಕಡಿಗಳ ಆಗಮನ, ವಾಲಿ ಫೈರಿಂಗ್‌, ಆಯುಕ್ತರಿಗೆ ಹುತಾತ್ಮರ ಸ್ಮರಣೆ ಹೀಗೆ ಹಲವಾರು ಕಾರ್ಯಕ್ರಮಗಳ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು.

Tags:

error: Content is protected !!