ಬೆಳಗಾವಿ ಜಿಲ್ಲೆಯ ಕಿತ್ತೂರು ಕ್ಷೇತ್ರದಲ್ಲಿ ವರ್ಷಗಳಿಂದ ಹದಗೆಟ್ಟಿದ್ದ ಪ್ರಮುಖ ರಸ್ತೆಯ ಅಭಿವೃದ್ಧಿಗೆ ಕೊನೆಗೂ ಚಾಲನೆ ಸಿಕ್ಕಿದೆ.

ಮಾರ್ಗನಕೊಪ್ಪ, ದೇವರಶಿಗಿಹಳ್ಳಿ ಹಾಗೂ ಕ್ಯಾರಕೊಪ್ಪ ಗ್ರಾಮಗಳ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ನವೀಕರಣಕ್ಕೆ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಮುಂದಾಗಿದ್ದಾರೆ.
ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ರೈತರು ಪ್ರತಿನಿತ್ಯ ಸಂಚರಿಸುತ್ತಿದ್ದ ಈ ರಸ್ತೆಯಲ್ಲಿ ಗುಂಡಿಗಳಿಂದಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ರಸ್ತೆಯ ದುಸ್ಥಿತಿಯಿಂದಾಗಿ ಜನರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿತ್ತು.
ಕಿತ್ತೂರು ಹಾಗೂ ಖಾನಾಪುರ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ರಸ್ತೆ, ಮತ್ತೊಂದು ಕಡೆ ರಾಷ್ಟ್ರೀಯ ಹೆದ್ದಾರಿಯನ್ನ ಸಂಪರ್ಕಿಸುವ ಈ ರಸ್ತೆ
ಈ ರಸ್ತೆಯ ಅಭಿವೃದ್ಧಿಗಾಗಿ ಎರಡೂ ಕ್ಷೇತ್ರಗಳ ಜನರು ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದರು.

ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಅವರ ಪ್ರಯತ್ನದಿಂದ ಇದೀಗ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇನ್ನೊಂದೆಡೆ, ರಸ್ತೆ ಅಭಿವೃದ್ಧಿಯ ವಿಚಾರವಾಗಿ ಖಾನಾಪುರ ಕ್ಷೇತ್ರದ ಜನರು ತಮ್ಮ ಕ್ಷೇತ್ರದ ಜನಪ್ರತಿನಿಧಿಗಳ ಕಾರ್ಯವೈಖರಿಯ ಕುರಿತು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂಬ ಮಾತುಗಳು ಸ್ಥಳೀಯ ವಲಯದಲ್ಲಿ ಕೇಳಿಬರುತ್ತಿವೆ.
ಬೈಟ್ – ಸ್ಥಳೀಯ ನಿವಾಸಿಗಳು
“ಈ ರಸ್ತೆ ಸಾಕಷ್ಟು ವರ್ಷಗಳಿಂದ ಹಾಳಾಗಿತ್ತು. ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ಪ್ರತಿದಿನ ತೊಂದರೆ ಅನುಭವಿಸುತ್ತಿದ್ದರು. ಈ ಹಿಂದೆ ರಸ್ತೆ ಅಭಿವೃದ್ಧಿಗೆ ಯಾರೂ ಗಮನ ಹರಿಸಿರಲಿಲ್ಲ. ಇದೀಗ ಕಿತ್ತೂರು ಶಾಸಕರು ರಸ್ತೆ ಅಭಿವೃದ್ಧಿಗೆ ಮುಂದಾಗಿರುವುದರಿಂದ ನಮಗೆ ತುಂಬಾ ಸಂತೋಷವಾಗಿದೆ” ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೈಟ್ – ಶಾಸಕ ಬಾಬಾಸಾಹೇಬ್ ಪಾಟೀಲ
“ಈ ರಸ್ತೆ ಅಭಿವೃದ್ಧಿಗೆ ಸಾಕಷ್ಟು ವರ್ಷಗಳಿಂದ ಬೇಡಿಕೆ ಇತ್ತು. ಕಳೆದ ತಿಂಗಳಲ್ಲೇ ಗುದ್ದಲಿ ಪೂಜೆ ನಡೆಯಬೇಕಾಗಿತ್ತು. ಆದರೆ ಕೆಲವು ಕಾರಣಗಳಿಂದ ವಿಳಂಬವಾಯಿತು.
ಈ ರಸ್ತೆ ಅಭಿವೃದ್ಧಿಯಿಂದ ಕಿತ್ತೂರು ಕ್ಷೇತ್ರದ ಹಲವು ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ. ಜನರಿಗೆ ಯಾವುದೇ ತೊಂದರೆಯಾಗದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದು ನಮ್ಮ ಉದ್ದೇಶ” ಎಂದು ಶಾಸಕ ಬಾಬಾಸಾಹೇಬ್ ಪಾಟೀಲ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಕುರಿತು ಮಾತನಾಡಿದ ಶಾಸಕರು, ಎಲ್ಲರಿಗೂ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಇರುತ್ತದೆ.
ಆದರೆ ಆಸೆಯ ಜೊತೆಗೆ ಅರ್ಹತೆಯೂ ಇರಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಮರಕಟ್ಟಿ ಗ್ರಾಮದಲ್ಲಿನ ಬಸ್ ನಿಲ್ದಾಣದ ದುಸ್ಥಿತಿಯ ಕುರಿತು ಪ್ರತಿಕ್ರಿಯಿಸಿದ ಅವರು, ಮುಂಬರುವ ದಿನಗಳಲ್ಲಿ ಹೊಸ ಬಸ್ ನಿಲ್ದಾಣ ನಿರ್ಮಾಣಕ್ಕೆ ಯೋಜನೆ ರೂಪಿಸುವುದಾಗಿ ತಿಳಿಸಿದರು.
ವರದಿಗಾರರು
ಶಾನೂಲ ಮತ್ತೆಖಾನ
ಕಿತ್ತೂರು
