State

ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ಶರ್ಮಿಳಾ ರೆಡ್ಡಿ: ವಿಧಾನಸೌಧದಲ್ಲಿ ರಾಜಕೀಯ ಕುತೂಹಲ!

Share

ಕರ್ನಾಟಕ ರಾಜಕಾರಣದಲ್ಲಿ ಇಂದು ಮಹತ್ವದ ವಿದ್ಯಮಾನವೊಂದು ನಡೆದಿದೆ. ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ರೆಡ್ಡಿ ಅವರು ತಮ್ಮ ಪುತ್ರ ರಾಜಾರೆಡ್ಡಿ ಅವರೊಂದಿಗೆ ಬೆಂಗಳೂರಿನ ವಿಧಾನಸೌಧಕ್ಕೆ ಆಗಮಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ರೆಡ್ಡಿ ಹಾಗೂ ಅವರ ಪುತ್ರ ರಾಜಾರೆಡ್ಡಿ ಅವರು ಶುಕ್ರವಾರ ಹಾರ್ದಿಕವಾಗಿ ಭೇಟಿಯಾದರು. ಈ ಸೌಹಾರ್ದಯುತ ಭೇಟಿಯ ವೇಳೆ ಉಭಯ ನಾಯಕರು ಎರಡೂ ರಾಜ್ಯಗಳ ಪ್ರಸ್ತುತ ರಾಜಕೀಯ ವಿದ್ಯಮಾನಗಳು, ಕಾಂಗ್ರೆಸ್ ಪಕ್ಷ ಸಂಘಟನೆ ಹಾಗೂ ಮುಂಬರುವ ಮಹತ್ವದ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ವೈ.ಎಸ್. ರಾಜಶೇಖರ ರೆಡ್ಡಿ ಅವರ ಕುಟುಂಬದೊಂದಿಗಿನ ಹಳೆಯ ಬಾಂಧವ್ಯವನ್ನು ಸ್ಮರಿಸಿದ ಡಿ.ಕೆ. ಶಿವಕುಮಾರ್, ಶರ್ಮಿಳಾ ಅವರ ರಾಜಕೀಯ ಹೋರಾಟಕ್ಕೆ ಪೂರ್ಣ ಬೆಂಬಲ ಸೂಚಿಸಿದರು. ದಿಢೀರ್ ನಡೆದ ಈ ಉನ್ನತ ಮಟ್ಟದ ಭೇಟಿಯು ನೆರೆ ರಾಜ್ಯಗಳ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Tags:

error: Content is protected !!