Belagavi

ಜೋಶಿ ಕುಟುಂಬದ ಕುರಿತು ನೀಡಿದ್ದ ಹೇಳಿಕೆ ಹಿಂಪಡೆದ ಶಶಿಕಾಂತ ಗುರೂಜಿ!!!

Share

ಹುಬ್ಬಳ್ಳಿಯಲ್ಲಿ ಕಬ್ಬು ಬೆಳೆಗಾರರ ವಿವಿಧ ಸಮಸ್ಯೆಗಳ ಕುರಿತು ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕುಟುಂಬದ ಬಗ್ಗೆ ಆಡಿದ ಮಾತಿಗೆ ಶಶಿಕಾಂತ ಪಡಸಲಗಿ ಗುರೂಜಿ ವಿಷಾದ ವ್ಯಕ್ತಪಡಿಸಿದ್ದಾರೆ. ರೈತರ ಸಮಸ್ಯೆಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಆ ಮಾತುಗಳನ್ನಾಡಿದ್ದೆ ಎಂದು ಸ್ಪಷ್ಟಪಡಿಸಿರುವ ಅವರು, ತಮ್ಮ ಹೇಳಿಕೆಯಿಂದ ನೋವಾಗಿದ್ದರೆ ಅದನ್ನು ವಾಪಸ್ ಪಡೆಯುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ ಕಬ್ಬು ಬೆಳೆಗಾರರ ಪ್ರಮುಖ ಸಮಸ್ಯೆಗಳಾದ ಎಂ.ಎಸ್.ಪಿ., ಎಥೆನಾಲ್ ಹಾಗೂ ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕುಟುಂಬದ ಕುರಿತು ಆಡಿದ ಮಾತಿನಿಂದ ನೋವುಂಟಾಗಿದ್ದರೆ ವಿಷಾದ ವ್ಯಕ್ತಪಡಿಸಿ ಹೇಳಿಕೆಯನ್ನು ವಾಪಸ್ ಪಡೆಯುವುದಾಗಿ ಶಶಿಕಾಂತ ಪಡಸಲಗಿ ಗುರೂಜಿ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸಚಿವರ ಮನೆಗೆ ತೆರಳಿ ಮನವಿ ನೀಡಿದರೂ ಸ್ಪಂದಿಸಿಲ್ಲ ಹಾಗೂ 5 ಲಕ್ಷ ಜನರು ಪ್ರತಿಭಟಿಸುವ ಮಾಹಿತಿ ನೀಡಿದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಆ ಮಾತನ್ನಾಡಿದ್ದಾಗಿ ಅವರು ತಿಳಿಸಿದ್ದಾರೆ. ಬಿಜೆಪಿಯ ಎಲ್ಲ ಕಾರ್ಯಕರ್ತರು ಹಾಗೂ ಜೋಶಿ ಅಭಿಮಾನಿಗಳು ಈ ಮಾತನ್ನು ಅಪಾರ್ಥ ಮಾಡಿಕೊಳ್ಳಬಾರದು ಎಂದು ಮನವಿ ಮಾಡಿರುವ ಅವರು, ಜಗತ್ತಿನಲ್ಲಿ ಪ್ರತಿಯೊಬ್ಬ ಮಹಿಳೆಯೂ ಸನ್ಯಾಸಿಗೆ ಜನ್ಮ ನೀಡುವ ಸ್ವರೂಪರಾಗಿದ್ದು ಅವರಿಗೆ ಗೌರವ ನೀಡುವುದಾಗಿ ಹೇಳಿದ್ದಾರೆ.

Tags:

error: Content is protected !!