ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಡಿ ಕೈಗೆತ್ತಿಕೊಳ್ಳಲಾದ ಸಿಮೆಂಟ್ ಪೇವರ್ಸ್ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಲಾ ಆವರಣದ ಅಭಿವೃದ್ಧಿಗೆ ತಕ್ಷಣ ಸ್ಪಂದಿಸಿ ಅನುದಾನ ಒದಗಿಸಿದ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಹೃತ್ಪೂರ್ವಕ ಧನ್ಯವಾದ ಸಮರ್ಪಿಸಿದ್ದಾರೆ.
ಶಿಂದೊಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳ ಸುಗಮ ಸಂಚಾರ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ಸಂಸದ ಜಗದೀಶ್ ಶೆಟ್ಟರ್ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸಿಮೆಂಟ್ ಪೇವರ್ಸ್ ಅಳವಡಿಸುವ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಗ್ರಾಮಸ್ಥರು ಹಾಗೂ ಶಾಲಾ ಮಂಡಳಿಯ ಮನವಿಗೆ ತಕ್ಷಣ ಸ್ಪಂದಿಸಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿದ ಸಂಸದರ ಜನಪರ ಕಾಳಜಿಗೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಶಾಲೆಯ ಅಭಿವೃದ್ಧಿಗೆ ನೆರವಾದ ಸಂಸದರಿಗೆ SDMC, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಪರವಾಗಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಸಮಾಜ ಸೇವಕ ವೀರಭದ್ರಯ್ಯ ಬಾಬು ಪೂಜಾರ ಮತ್ತು ಪ್ರಧಾನ ಗುರುಗಳಾದ ಎ. ಎಸ್. ಹಂಚಿನಮನಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಯುವರಾಜ ಜಾಧವ, ಉಮೇಶ ಪುರಿ, ಶಿಕ್ಷಣ ಇಲಾಖೆಯ ಅಧಿಕಾರಿ ವಸಂತ ಕಲಬುರ್ಗಿ, SDMC ಅಧ್ಯಕ್ಷ ಮಾಳಿಗರಾಯ ಶಹಾಪೂರಕರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು
