Belagavi

ದಸರಾ ರಜೆ ಕಡಿತಗೊಳಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಶ್ರೀರಾಮಸೇನೆ

Share

ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ದಸರಾ ರಜೆಯ ದಿನಗಳಲ್ಲಿಯೂ ಶಾಲೆಗಳನ್ನು ನಡೆಸಿ, ಹೆಚ್ಚುವರಿ ತರಗತಿಗಳ ಹೆಸರಿನಲ್ಲಿ ಮಕ್ಕಳಿಗೆ ನೀಡಬೇಕಾದ ರಜೆಯನ್ನು ಕಡಿತಗೊಳಿಸುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಶ್ರೀರಾಮಸೇನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂಬಂಧ ಡಿಡಿಪಿಐ ಲೀಲಾವತಿ ಹಿರೇಮಠ ಅವರಿಗೆ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ರವಿಕುಮಾರ ಕೋಕಿತಕರ ಅವರು ಮನವಿಯನ್ನು ಸಲ್ಲಿಸಿದರು.
ಸರ್ಕಾರವು ದಸರಾ ಹಬ್ಬದ ಮುನ್ನೆಚ್ಚರಿಕೆಯಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 3 ರಿಂದ ಅಕ್ಟೋಬರ್ 21 ರವರೆಗೆ ಅಧಿಕೃತವಾಗಿ ದಸರಾ ರಜೆಯನ್ನು ಘೋಷಿಸಿದೆ. ಆದರೆ, ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಈ ಮಾರ್ಗಸೂಚಿಯನ್ನು ಗಾಳಿಗೆ ತೂರಿ, ಹತ್ತು ದಿನಗಳ ಕಾಲ ಹೆಚ್ಚುವರಿ ತರಗತಿಗಳನ್ನು ನಡೆಸುವುದು ಹಾಗೂ ರಜೆಯನ್ನು ಮೊಟಕುಗೊಳಿಸುವಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿವೆ ಎಂದು ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿಕುಮಾರ್ ಕೋಕಿತಕರ ಆರೋಪಿಸಿದ್ದಾರೆ.

ಹಿಂದೂ ಧರ್ಮದ ಹಲವು ಪವಿತ್ರ ಹಬ್ಬಗಳು ಹಾಗೂ ಸಾಂಪ್ರದಾಯಿಕ ಆಚರಣೆಗಳು ದಸರಾ ಕಾಲಘಟ್ಟದಲ್ಲಿಯೇ ಬರುವುದರಿಂದ, ಮಕ್ಕಳಿಗೆ ಸಿಗಬೇಕಾದ ಹಬ್ಬದ ರಜೆಯನ್ನು ಪೂರ್ಣ ಪ್ರಮಾಣದಲ್ಲಿ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಶಾಲೆಗಳನ್ನು ನಡೆಸುವ ಮತ್ತು ರಜೆ ಕಡಿತಗೊಳಿಸುವ ಶಿಕ್ಷಣ ಸಂಸ್ಥೆಗಳ ಮೇಲೆ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರು ಭಾಗಿಯಾಗಿದ್ಧರು.

Tags:

error: Content is protected !!