Vijaypura

ಸಮಯಕ್ಕೆ ಸರಿಯಾಗಿ ಬಸ್ ಬಾರದ ಕಾರಣ ವಿದ್ಯಾರ್ಥಿಗಳ ಪರದಾಟ: ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

Share

ವಿಜಯಪುರ ಜಿಲ್ಲೆಯ ತಿಡಗುಂದಿ ಗ್ರಾಮಕ್ಕೆ ಸರಿಯಾದ ಸಮಯಕ್ಕೆ ಬಸ್ ಸಂಚಾರ ವ್ಯವಸ್ಥೆ ಇಲ್ಲದ ಕಾರಣ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಗ್ರಾಮಕ್ಕೆ ಬರುವ ಬಸ್‌ಗಳು ನಿಗದಿತ ಸಮಯಕ್ಕೆ ಬರುತ್ತಿಲ್ಲ. ಒಂದು ವೇಳೆ ಬಸ್ ಬಂದರೂ ಪ್ರಯಾಣಿಕರಿಂದ ತುಂಬಿ ತುಳುಕುತ್ತಿರುವುದರಿಂದ ವಿದ್ಯಾರ್ಥಿಗಳು ಬಸ್ ಹತ್ತಲು ಸಾಧ್ಯವಾಗುತ್ತಿಲ್ಲ. ಇದರಿಂದ ಪ್ರತಿನಿತ್ಯ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ.

ಈ ಸಮಸ್ಯೆಯಿಂದ ಬೇಸತ್ತ ತಿಡಗುಂದಿ ಗ್ರಾಮದ ವಿದ್ಯಾರ್ಥಿಗಳು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮಕ್ಕೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ನಿಗದಿತ ಸಮಯಕ್ಕೆ ಬಸ್ ಸಂಚಾರ ಆರಂಭಿಸಬೇಕು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸಾರಿಗೆ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಆದಷ್ಟು ಬೇಗ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು.

Tags:

error: Content is protected !!