Dharwad

ಧಾರವಾಡದಲ್ಲಿ ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ: ಯರಿಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್‌ ಮುಂದುವರಿಕೆ

Share

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಧರಣಿ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಹೀಗಾಗಿ ಹೋರಾಟಗಾರರು ತಮ್ಮ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಮುಂದುವರೆಸಿದ್ದಾರೆ.

ಬೆಳಿಗ್ಗೆಯಿಂದಲೇ ಧಾರವಾಡ ತಾಲೂಕಿನ ಯರಿಕೊಪ್ಪ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್‌ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ಚೂನಪ್ಪ ಪೂಜಾರಿಯವರು ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಸಂಜೆ 6 ಗಂಟೆಯವರೆಗೆ ಗಡುವು ನೀಡಿದ್ದರು. ಸಂಜೆ 6 ಗಂಟೆಯೊಳಗೆ ಎಫ್‌ಆರ್‌ಪಿ ಹಾಗೂ ಎಂಎಸ್‌ಪಿ ದರ ಹೆಚ್ಚಳ ಮಾಡಬೇಕು; ಇಲ್ಲದೇ ಹೋದಲ್ಲಿ ಅಹೋರಾತ್ರಿ ಹೆದ್ದಾರಿ ಬಂದ್ ಮಾಡಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದರು. ಆದರೆ, ಸಂಜೆ 7 ಗಂಟೆಯಾದರೂ ಕೇಂದ್ರ ಸಚಿವರಿಂದ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ, ಇದೀಗ ರೈತರು ಹೆದ್ದಾರಿಯಲ್ಲೇ ಕುಳಿತು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಸ್ಥಳಕ್ಕೆ ಭಜನಾ ತಂಡದವರನ್ನೂ ಕರೆಯಿಸಿ ಹೋರಾಟವನ್ನು ಮುಂದುವರೆಸಿದ್ದಾರೆ.

Tags:

error: Content is protected !!