VIJAYANAGAR

ಕಬ್ಬು ಬೆಳೆಗಾರರ ಹೋರಾಟ: ರೈತರಿಗೆ ನ್ಯಾಯ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ – ಸಂಸದ ಜಗದೀಶ್ ಶೆಟ್ಟರ್

Share

ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಕಬ್ಬು ಬೆಳೆಗಾರರ ಹೋರಾಟ ಹಾಗೂ ನ್ಯಾಯಯುತ ಬೇಡಿಕೆಗಳ ಕುರಿತು ವಿಜಯನಗರದಲ್ಲಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಹತ್ವದ ಹೇಳಿಕೆ ನೀಡಿದ್ದಾರೆ. ರೈತರಿಗೆ ಸೂಕ್ತ ಬೆಲೆ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ.

ವಿಜಯನಗರದಲ್ಲಿ ಕಬ್ಬು ಬೆಳೆಗಾರರ ಹೋರಾಟದ ಕುರಿತು ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್, ರೈತರ ಬೇಡಿಕೆಗಳು ನ್ಯಾಯಯುತವಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾನದಂಡಗಳ ಬಗ್ಗೆ ಗಂಭೀರ ಚರ್ಚೆಯಾಗಬೇಕು ಎಂದರು. ತಾವೂ ಕೂಡ ರೈತರಿಗೆ ನ್ಯಾಯ ಸಿಗಬೇಕು ಎನ್ನುವವರಲ್ಲಿ ಒಬ್ಬ1 ಎಂದು ಪ್ರತಿಪಾದಿಸಿದ ಅವರು, ತಾನು ಸಕ್ಕರೆ ಮಂತ್ರಿಯಾಗಿದ್ದ ಹಾಗೂ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಸಿ ಎಫ್‌ಆರ್‌ಪಿ (FRP) ದರ ನಿಗದಿ ಹಾಗೂ ಅದಕ್ಕೆ ಸಂಬಂಧಿಸಿದ ಕಾಯ್ದೆಯನ್ನು ಜಾರಿಗೊಳಿಸಿದ್ದೆ ಎಂದು ಸ್ಮರಿಸಿದರು. ಸಕ್ಕರೆ ಸಚಿವರು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ಹೇಳುತ್ತಿರುವುದು ಸರಿಯಲ್ಲ, ಕಾಯ್ದೆಯನ್ನು ಒಮ್ಮೆ ಪರಿಶೀಲಿಸಬೇಕು ಎಂದರು.

ಕೇಂದ್ರ ಸರ್ಕಾರವು ಎಂಎಸ್‌ಪಿ (MSP) ದರ ನಿಗದಿಪಡಿಸುವುದರ ಜತೆಗೆ ರೈತರಿಗೆ ಯೋಗ್ಯ ಬೆಲೆ ಕಲ್ಪಿಸಿಕೊಡಬೇಕಿದೆ ಎಂದು ತಿಳಿಸಿದ ಶೆಟ್ಟರ್, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಬರಗಾಲವಿದ್ದು, ಕೇಂದ್ರದಿಂದ ಹಣ ತರಲಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ತಾನು ಮತ್ತು ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದಿಂದ ಬರ ಪರಿಹಾರ ತಂದಿದ್ದೆವು ಎಂದರು. ಕೇಂದ್ರ ಸರ್ಕಾರ ರೈತರ ಕೈಬಿಡುವುದಿಲ್ಲ ಎಂದು ಭರವಸೆ ನೀಡಿದ ಅವರು, ರಾಜ್ಯ ಸರ್ಕಾರವೂ ಕೂಡ ತನ್ನ ಖಜಾನೆಯಿಂದ ರೈತರಿಗೆ ಅಗತ್ಯ ಪರಿಹಾರ ಹಾಗೂ ಹಣ ನೀಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ, ರಾಜ್ಯ ಸರ್ಕಾರದ ಆಡಳಿತ ವೈಖರಿ ಹಾಗೂ ಸಚಿವರ ಹೇಳಿಕೆಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್, ಡಿ.ಕೆ. ಶಿವಕುಮಾರ್ ಸೇರಿದಂತೆ ಆಡಳಿತರೂಢ ನಾಯಕರಿಗೆ ಸರ್ಕಾರ ನಡೆಸಲು ಆಸಕ್ತಿಯಿಲ್ಲವೇ ಎಂಬ ಪ್ರಶ್ನೆ ಮೂಡಿದೆ ಎಂದು ವಾಗ್ದಾಳಿ ನಡೆಸಿದರು. ಬರಪರಿಹಾರ ಮತ್ತು ಕೇಂದ್ರದ ಅನುದಾನದ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು, ಕೂಡಲೇ ರೈತರ ಸಂಕಷ್ಟಗಳಿಗೆ ಸ್ಪಂದಿಸುವಂತೆ ಅವರು ಕರ ನೀಡಿದರು.

Tags:

error: Content is protected !!