ಬೆಳಗಾವಿ ತಾಲ್ಲೂಕಿನ ಅಂಬೇವಾಡಿ ಗ್ರಾಮದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಮಾಡರ್ನ್ ಬಸ್ ನಿಲ್ದಾಣವು ಇಂದು ನಿರ್ವಹಣೆಯಿಲ್ಲದೆ ಅನಾಥವಾಗಿದೆ. ಸಾರ್ವಜನಿಕರ ಹಣ ಪೋಲಾಗಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಳಗಾವಿ ತಾಲ್ಲೂಕಿನ ಆಂಬೇವಾಡಿ ಗ್ರಾಮದಲ್ಲಿ ಸುಮಾರು 8.67 ಲಕ್ಷ ರೂಪಾಯಿಗಳ ಅಧಿಕ ವೆಚ್ಚದಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ ನಿರ್ಮಿಸಲಾದ ಮಾಡರ್ನ್ ಬಸ್ ನಿಲ್ದಾಣವು ಇಂದು ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ಧೂಳು ತಿನ್ನುವಂತಾಗಿದೆ. ಬಸ್ ನಿಲ್ದಾಣದ ಸದ್ಬಳಕೆಯಾಗದೆ ಪ್ರಯಾಣಿಕರು ರಸ್ತೆಯಲ್ಲೇ ಬಸ್‌ಗಾಗಿ ಕಾಯುವ ದುಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣದ ಸುತ್ತಮುತ್ತ ಗಿಡಗಂಟಿಗಳು ಬೆಳೆದುಕೊಂಡಿದ್ದು, ಕಿಡಿಗೇಡಿಗಳ ತಾಣವಾಗಿ ಮಾರ್ಪಟ್ಟಿದೆ. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸಿದ ಈ ಸೌಲಭ್ಯವು ಕೇವಲ ಕಾಗದದ ಮೇಲಷ್ಟೇ ಸೀಮಿತವಾಗಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇತ್ತ ಗಮನಹರಿಸಿ ತಕ್ಷಣವೇ ಬಸ್ ನಿಲ್ದಾಣವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು ಎಂದು ಗ್ರಾಮಸ್ಥರು ಮತ್ತು ಪ್ರಯಾಣಿಕರು ತೀವ್ರವಾಗಿ ಆಗ್ರಹಿಸಿದ್ದಾರೆ.
