ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೇರವಾಗಿ ಗೆಲ್ಲಲಾಗದೆ ಬಿಜೆಪಿ ನಾಯಕರು ಕುತಂತ್ರ ರಾಜಕಾರಣ ಮಾಡುತ್ತಿರುವ ಬಿಜೆಪಿಗರಿಗೆ ನಾಚಿಕೆಯಾಗಬೇಕು. ಸರ್ವಧರ್ಮ ಸಮಭಾವದೊಂದಿಗೆ ಎಲ್ಲ ಜಾತಿ, ಧರ್ಮದವರನ್ನು ಸಮಾನವಾಗಿ ರಕ್ಷಿಸುತ್ತಾ ಬಂದಿರುವ ತಮ್ಮ ಅಧಿಕಾರದ ಮದವನ್ನು ಇಳಿಸುವುದಾದರೆ ಇಳಿಸಲಿ, ತಾನೆಂದೂ ಅದಕ್ಕೆ ಬೇಸರ ಮಾಡಿಕೊಳ್ಳುವುದಿಲ್ಲ ಎಂದು ವಿರೋಧಿಗಳಿಗೆ ದಿಟ್ಟ ತಿರುಗೇಟು ನೀಡಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೇರವಾಗಿ ಗೆಲ್ಲಲಾಗದೆ ಬಿಜೆಪಿ ನಾಯಕರು ಕುತಂತ್ರಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಆಯೋಗದ ಸಹಾಯದಿಂದ ಮತಗಳನ್ನು ಶಫಲ್ ಮಾಡುವುದು, ಒಂದು ಬೂತ್‌ನಿಂದ ಇನ್ನೊಂದು ಬೂತ್‌ಗೆ ಬದಲಾಯಿಸುವುದು ಹಾಗೂ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು, ದಲಿತರು ಮತ್ತು ಬಡವರ ಮತಗಳನ್ನು ಕಿತ್ತುಕೊಳ್ಳುವ ನಾಚಿಕೆಗೇಡಿನ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. ರಾಜ್ಯದ ಒಬ್ಬ ಪ್ರಜಾಪ್ರತಿನಿಧಿಯಾಗಿ, ಮುಖ್ಯಮಂತ್ರಿಯಾಗಿ ಮತ್ತು ಪಕ್ಷದ ಮುಖ್ಯಸ್ಥನಾಗಿ ಎಲ್ಲ ಮತದಾರರಿಗೆ ಅವರ ಹಕ್ಕನ್ನು ಕೊಡಿಸುವ ಹಾಗೂ ರಕ್ಷಣೆ ಮಾಡುವ ಸಂಪೂರ್ಣ ಜವಾಬ್ದಾರಿ ತನ್ನದಾಗಿದ್ದು, ಆ ಕೆಲಸವನ್ನು ಖಂಡಿತ ಮಾಡುವುದಾಗಿ ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ವೀರಶೈವ ಸ್ವಾಮೀಜಿಗಳ ಕಾರ್ಯಕ್ರಮದಲ್ಲಿ ತಾನು ಮಾತನಾಡಿದ್ದನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದು, ಸರ್ವಧರ್ಮ ಸಮಭಾವದೊಂದಿಗೆ ಎಲ್ಲ ಜಾತಿ, ಧರ್ಮದವರನ್ನು ಸಮಾನವಾಗಿ ರಕ್ಷಿಸುತ್ತಾ ಬಂದಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ತಮ್ಮ ಅಧಿಕಾರದ ಮದವನ್ನು ಇಳಿಸುವುದಾದರೆ ಇಳಿಸಲಿ, ತಾನೆಂದೂ ಅದಕ್ಕೆ ಬೇಸರ ಮಾಡಿಕೊಳ್ಳುವುದಿಲ್ಲ ಎಂದು ವಿರೋಧಿಗಳಿಗೆ ದಿಟ್ಟ ತಿರುಗೇಟು ನೀಡಿದ್ದಾರೆ.
ರಾಜ್ಯ ರಾಜಕೀಯ ಬೆಳವಣಿಗೆಗಳ ನಡುವೆ, ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲು ತೆರಳುತ್ತಿರುವುದಾಗಿ ತಿಳಿಸಿರುವ ಡಿ.ಕೆ. ಶಿವಕುಮಾರ್, ಅದಕ್ಕೂ ಮುನ್ನ ಅಧಿಕಾರಿಗಳೊಂದಿಗೆ ಬ್ರೀಫಿಂಗ್ ಸಭೆ ನಡೆಸುವುದಾಗಿ ಹೇಳಿದರು. ಸಚಿವ ಕೃಷ್ಣ ಬೈರೇಗೌಡರು ಈಗಾಗಲೇ ಮುಂಚಿತವಾಗಿ ತೆರಳಿ ಸಭೆಗಳನ್ನು ನಡೆಸುತ್ತಿದ್ದಾರೆ ಎಂದ ಅವರು, ಜಿಎಸ್‌ಟಿ ಸಭೆಯ ಬಳಿಕ ಪಕ್ಷದ ತುರ್ತು ಕೆಲಸದ ನಿಮಿತ್ತ ನಾಳಿದ್ದು ಗೋವಾಕ್ಕೆ ತೆರಳಿ ವಾಪಸ್ ಬರುವುದಾಗಿ ತಿಳಿಸಿದ್ದಾರೆ. ಇನ್ನು ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಹಾಗೂ ಬಿಜೆಪಿಯ ಪ್ರತಿಭಟನೆಗಳ ಕುರಿತು ಮಾತನಾಡಿ, ರಾಜ್ಯದ ಜನತೆಗೆ ಹಾಗೂ ರೈತರಿಗೆ ಏನು ಒಳ್ಳೆಯದು ಮಾಡಬೇಕು ಎಂಬುದರ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
