State

ಸಿಎಂ ಆದ ಮೇಲೂ ನನ್ನನ್ನು ಟ್ರ್ಯಾಪ್ ಮಾಡಲು ಯತ್ನಿಸಿದ್ದಾರೆ

Share

ಮುಖ್ಯಮಂತ್ರಿ ಆದ ಬಳಿಕ ತಮ್ಮನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಫೋಟಕ ಆರೋಪ ಮಾಡಿದ್ದಾರೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಕುಳಿತಿರುವುದರಿಂದ ಸುಮ್ಮನೆ ಮಾತನಾಡುವುದಿಲ್ಲ. ಎಲ್ಲ ಸಾಕ್ಷ್ಯಾಧಾರಗಳಿವೆ. ಅಗತ್ಯ ಬಿದ್ದರೇ ಫೋಟೋ ರಿಲೀಸ್ ಮಾಡುವುದಾಗಿ ತಿಳಿಸಿದ್ದಾರೆ.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಆದ ಬಳಿಕ ತಮ್ಮನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಕರ್ನಾಟಕದ ಮುಖ್ಯಮಂತ್ರಿ ಸ್ಫೋಟಕ ಆರೋಪ ಮಾಡಿದ್ದಾರೆ. ಸಚಿವರಿಗೆ ಸ್ಟಿಂಗ್ ಆಪರೇಷನ್ ಬಗ್ಗೆ ಸಚಿವ ಸಂಪುಟ ಸಭೆಯಲ್ಲೇ ಎಚ್ಚರಿಕೆ ನೀಡಿರುವ ವಿಚಾರದ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ತಮ್ಮ ಬಳಿ ಈ ಬಗ್ಗೆ ಎಲ್ಲ ಮಾಹಿತಿಯೂ ಇದೆ ಎಂದಿದ್ದಾರೆ. ತಮ್ಮ ಬಳಿ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ ಎಂದಿರುವ ಡಿಕೆ ಶಿವಕುಮಾರ್, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ತಮಗೆ ಗೊತ್ತಿದೆ ಎಂದು ಹೇಳಿದ್ದಾರೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ ಎಂದು ಹೇಳಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿ ಕುಳಿತಿರುವುದರಿಂದ ಸುಮ್ಮನೆ ಮಾತನಾಡುವುದಿಲ್ಲ. ಎಲ್ಲ ಸಾಕ್ಷ್ಯಾಧಾರಗಳಿವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮವರು ಎಚ್ಚರಿಕೆಯಿಂದ ಇರಬೇಕೆಂದು ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆ ಮಾಡಲಾಗಿದೆ ಎಂಬ ಆರೋಪದ ಬಗ್ಗೆಯೂ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ. ಫಾರ್ಮ್-7 ಹೇಗೆ ದುರ್ಬಳಕೆಯಾಗಿದೆ ಎಂಬ ದಾಖಲೆಗಳನ್ನು ಹೈಕಮಾಂಡ್ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಎಲ್ಲ ದಾಖಲೆಗಳನ್ನು ತಮ್ಮೊಂದಿಗೆ ದೆಹಲಿಗೆ ತಂದಿದ್ದೇನೆ ಎಂದಿರುವ ಅವರು, ಈ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. ಬಿಜೆಪಿ ನಾಯಕರು ಯಾಕೆ ಪ್ರಕರಣ ದಾಖಲಿಸುತ್ತಿದ್ದೀರಿ ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ಈ ವಿಚಾರದಲ್ಲಿ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಈ ಅಕ್ರಮದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಕೆಲವು ನಾಯಕರೇ ಭಾಗಿಯಾಗಿದ್ದಾರೆ ಎಂಬ ಆರೋಪವನ್ನೂ ಡಿ.ಕೆ. ಶಿವಕುಮಾರ್ ಮಾಡಿದ್ದಾರೆ. ತಮ್ಮ ಹೆಸರು ಬಯಲಿಗೆ ಬರುತ್ತದೆ ಎಂಬ ಕಾರಣಕ್ಕೆ ತನಿಖೆ ಬೇಡ ಎನ್ನುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕರ ಮೇಲೆ ನಡೆದ ಪೊಲೀಸರ ದಾಳಿಯನ್ನು ಅಮಾನವೀಯ ಎಂದು ಅವರು ಹೇಳಿದ್ದಾರೆ.

ಕಳೆದ ಮೂರು ದಿನಗಳಿಂದ ಜಿಎಸ್ಟಿ ಸಭೆ ನಡೆಯುತ್ತಿದ್ದು, ಇಂದು ಮುಖ್ಯಮಂತ್ರಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ. ರಾಜ್ಯದ ಹಿತದೃಷ್ಟಿಯಿಂದ ಅಗತ್ಯ ಮಾಹಿತಿಯನ್ನು ತಿಳಿಸುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.

ಇನ್ನು ಸಚಿವರ ಸ್ಟಿಂಗ್ ಆಪರೇಷನ್ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ವಿಜಯೇಂದ್ರ, ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಯಾರು ಸ್ಟಿಂಗ್ ಆಪರೇಷನ್ ಮಾಡುತ್ತಿದ್ದಾರೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಹೇಳಿದ್ದಾರೆ. ತಮ್ಮ ಶಾಸಕರ ಮೇಲೆಯೇ ಸ್ಟಿಂಗ್ ಮಾಡುತ್ತಾರೋ, ಡಿಂಗ್ ಡಿಂಗ್ ಆಪರೇಷನ್ ಯಾರು ಮಾಡಿದ್ದಾರೆ ಎಂಬುದೂ ಗೊತ್ತಿದೆ ಎಂದು ಡಿ.ಕೆ. ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.

Tags:

error: Content is protected !!