Vijaypura

ಕಬ್ಬು ಬೆಳೆಗಾರರ ಆಕ್ರೋಶಕ್ಕೆ ಮುಳ್ಳಿನ ತಡೆ!

Share

ಕಬ್ಬಿಗೆ ಸೂಕ್ತ ದರ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ವಿಜಯಪುರ ಜಿಲ್ಲೆಯಲ್ಲೂ ತೀವ್ರಗೊಂಡಿದೆ. ರಾಜ್ಯವ್ಯಾಪಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ ಮುದ್ದೇಬಿಹಾಳ ತಾಲೂಕಿನ ಕವಡಿಮಟ್ಟಿ ಗ್ರಾಮದ ರೈತರು, ರಸ್ತೆಯುದ್ದಕ್ಕೂ ಮುಳ್ಳುಗಳನ್ನು ಹಾಕಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ರೈತರು, ರಸ್ತೆಗೆ ಮುಳ್ಳುಗಳನ್ನು ಹಾಕುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದರು. ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸಿ ರೈತರ ಹಿತ ಕಾಪಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

Tags:

error: Content is protected !!