ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಬರ ಪರಿಹಾರ ನೀಡಲು ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಹಾಗೂ ಪ್ರತಿ ಎಕರೆಗೆ 50 ಸಾವಿರ ರೂಪಾಯಿ ಬರ ಪರಿಹಾರ ನೀಡಲು ಆಗ್ರಹಿಸಿ, ಧಾರವಾಡ ಗ್ರಾಮೀಣ ಮಾಜಿ ಶಾಸಕ ಅಮೃತ ದೇಸಾಯಿ ಅವರ ನೇತೃತ್ವದಲ್ಲಿ ಟ್ರಾಕ್ಟರ್ ರ್ಯಾಲಿಯ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಧಾರವಾಡ ತಾಲ್ಲೂಕಿನ ಶಿವಳ್ಳಿ ಗ್ರಾಮದಿಂದ ಟ್ರಾಕ್ಟರ್ ರ್ಯಾಲಿ ಪ್ರತಿಭಟನಾ ಮೆರವಣಿಗೆಗೆ ಸ್ವತಃ ಮಾಜಿ ಶಾಸಕ ಅಮೃತ ದೇಸಾಯಿ ರೈತನ ಟ್ರಾಕ್ಟರ್ ಚಾಲನೆ ಮಾಡುವ ಮೂಲಕ ಚಾಲನೆ ನೀಡಿದ್ದರು. ಇನ್ನೂ ಈ ಟ್ರಾಕ್ಟರ್ ರ್ಯಾಲಿಯು ಧಾರವಾಡ ತಾಲ್ಲೂಕಿನ ಶಿವಳ್ಳಿ ಗ್ರಾಮದಿಂದ ಆರಂಭಗೊಂಡು ಹೆಬ್ಬಳ್ಳಿ, ಚಂದನಮಟ್ಟಿ, ಕವಲಗೇರಿ, ಸೋನಾಪುರ ಸೇರಿದಂತೆ 6 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಸಂಚಾರ ಮಾಡಲಿದೆ. ನಂತರ ಧಾರವಾಡ ಮೂರುಸಾವಿರಮಠದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಲಿದೆ. ಇನ್ನೂ ಈ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಮೆರವಣಿಗೆಯಲ್ಲಿ ರೈತರ ಪರ ಗೀತೆಗಳೊಂದಿಗೆ ಸರ್ಕಾರಕ್ಕೆ ಅನ್ನದಾತರು ಹಿಡಿಶಾಪ ಹಾಕಿದ್ದು, ಈ ಕೂಡಲೇ ರಾಜ್ಯ ಸರ್ಕಾರ ಪ್ರತಿ ಏಕರೆ ಕೃಷಿ ಭೂಮಿ ಬೆಳೆ ಹಾನಿಯ ಪರಿಹಾರವಾಗಿ 50 ಸಾವಿರ ರೂಪಾಯಿ ನೀಡಬೇಕು ಎಂದು ಆಗ್ರಹಿಸಿದರು. ಒಂದು ಕಡೆ ಮಳೆ ಇಲ್ಲ, ಇನ್ನೊಂದು ಕಡೆ ರಾಜ್ಯದಲ್ಲಿನ ಸರ್ಕಾರ ರೈತರ ಪರವಾಗಿ ನಿಲ್ಲುತ್ತಿಲ್ಲ, ಇದೆಲ್ಲದರ ಮಧ್ಯೆ ಬರ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ. ಈ ಕೂಡಲೇ ರಾಜ್ಯ ಸರ್ಕಾರ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಮಾಡಬೇಕು. ರೈತರಿಗೆ ಪರಿಹಾರ ನೀಡಬೇಕಿಲ್ಲವಾದಲ್ಲಿ ಉಗ್ರವಾದ ಹೋರಾಟಕ್ಕೆ ಮುಂದಾಗುವುದಾಗಿ ಖಡಕ್ ಎಚ್ಚರಿಕೆ ನೀಡಿದರು.
ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಶಿವಳ್ಳಿ ಗ್ರಾಮದಿಂದ ಧಾರವಾಡ ಜ್ಯುಬಿಲಿ ವೃತ್ತದವರೆಗೆ ಬೃಹತ್ ಟ್ರ್ಯಾಕ್ಟರ್ ಪ್ರತಿಭಟನಾ ಮೆರವಣಿಗೆ ಆರಂಭಗೊಂಡಿದ್ದು, ಮಧ್ಯಾಹ್ನದವರೆಗೆ ಧಾರವಾಡಕ್ಕೆ ತಲುಪುವ ನಿರೀಕ್ಷೆಯಿದೆ.
ಸ್ವತಃ ಅಮೃತ ದೇಸಾಯಿ ಅವರೇ ಟ್ರ್ಯಾಕ್ಟರ್ ಚಲಾಯಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಮಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಬರ ಪರಿಹಾರವಾಗಿ ಸರ್ಕಾರ ನೀಡುತ್ತಿರುವ 2,500 ರೂ. ಸಾಲದು, ಪ್ರತಿ ಎಕರೆಗೆ 50,000 ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿ ಈ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಗಂಗನಗೌಡ ಪಾಟೀಲ ಕುಲಕರ್ಣಿ, ಶಂಕರ ಕೋಮಾರದೇಸಾಯಿ, ರಾಜಶೇಖರ ಮುದ್ದಿ, ಶಿವು ಬೆಳಾರದ, ಮಲ್ಲಿಕಾರ್ಜುನ ಚಿನ್ನಗುಡಿ ಸೇರಿದಂತೆ ಹಲವರು ಭಾಗವಹಿಸಿದ್ದರು.
