ರಾಜ್ಯದಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗಿನ ಸಭೆಯ ಕುರಿತು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚೂನ್ನಪ್ಪ ಪೂಜೇರಿ ಅವರು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.
ಗೋಕಾಕ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ವಿಡಿಯೋ ಹೇಳಿಕೆ ಬಿಡುಗಡೆ ಮಾತನಾಡಿದ ಅವರು ಬೆಳಗಾವಿಯಲ್ಲಿ ನಡೆಯಲಿರುವ ಪ್ರಮುಖ ಸಭೆಯ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿಗಳು 26 ನೇ ತಾರೀಖಿನಂದು ಬೆಳಗಾವಿಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರು ಸಹ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಇಡೀ ನಾಡಿನ ರೈತರ ಪರವಾಗಿ ವಿನಂತಿ ಮಾಡಿದ್ದಾರೆ.
ರಾಜ್ಯ, ದೇಶ ಹಾಗೂ ಜಾಗತಿಕ ಮಟ್ಟದಲ್ಲಿ ಸಕ್ಕರೆ ಕೊರತೆ ಎದುರಾಗಿದ್ದು, ಸಕ್ಕರೆ ಬೆಲೆ ಕಡಿಮೆಯಾಗುವ ಪ್ರಶ್ನೆಯೇ ಇಲ್ಲ. ₹50-60 ಕ್ಕಿಂತ ಕಡಿಮೆ ಬೆಲೆ ಇರಲು ಸಾಧ್ಯವಿಲ್ಲ ಎಂದು ಈ ಹಿಂದೆ ಸಚಿವರೂ ಸ್ಪಷ್ಟಪಡಿಸಿದ್ದರು. 26 ನೇ ತಾರೀಖಿನಂದು ನಡೆಯುವ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಭಾಗವಹಿಸಿ, ಕಾರ್ಖಾನೆ ಮಾಲೀಕರಿಗೆ ಧೈರ್ಯ ತುಂಬುವ ಹಾಗೂ ರೈತರಿಗೆ ನ್ಯಾಯ ಸಿಗುವಂತೆ ಮಾಡುವ ಕೆಲಸವನ್ನು ಮಾಡಬೇಕು.
ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳು ಈಡೇರಬೇಕು ಮತ್ತು ರೈತರ ಹಿತವನ್ನು ಕಾಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಚೂನ್ನಪ್ಪ ಪೂಜೇರಿ ಒತ್ತಾಯಿಸಿದರು.
