Belagavi

ಮುತಗಾ ಗ್ರಾಮ ಪಂಚಾಯಿತಿಗೆ ಉಪ ಲೋಕಾಯುಕ್ತ ಭೇಟಿ

Share

ರಾಜ್ಯ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಬೆಳಗಾವಿ ತಾಲೂಕು ಮುತಗಾ ಗ್ರಾಮ ಪಂಚಾಯಿತಿಗೆ ಶನಿವಾರ (ಅ.31) ಭೇಟಿ ನೀಡಿ ಪರಿಶೀಲಿಸಿದರು.

ಹಾಜರಾತಿ ನಿರ್ವಹಣೆಗೆ ಆಲಸ್ಯ ತೋರಿಸಿದ್ದು, ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸದ ಕಾರಣ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಮುತಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಗಳು ಕಂಡುಬಂದಲ್ಲಿ ಬಡಾವಣೆ ಮಾಲೀಕರು ಮತ್ತು ಪಿಡಿಒಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು.

ಗುತ್ತಿಗೆದಾರ ಜಿ.ಎಸ್.ಟಿ ನೋಂದಣಿ, ಗುತ್ತಿಗೆದಾರರ ರಸೀದಿ ನೀಡಬೇಕು. ಒಂದು ವೇಳೆ ಅಕ್ರಮ ವಹಿವಾಟು ಕಂಡುಬಂದಲ್ಲಿ ಅಂತವರ ಲೋಕಾಯುಕ್ತ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು.

ಮುತಗಾ ಅಂಗನವಾಡಿಗೆ ಭೇಟಿ

ಅಂಗನವಾಡಿ ಶಿಕ್ಷರಿಂದ ಮಾಹಿತಿ ಪಡೆದು, ಅಂಗನವಾಡಿ ಕೇಂದ್ರಗಳಲ್ಲಿ ಅಡುಗೆ ಅನಿಲ ಬಳಕೆ ಕುರಿತು ಎಚ್ಚರಿಕೆ ವಹಿಸಬೇಕು. ಅಪಾಯಕಾರಿ ವಸ್ತುಗಳಿಂದ ಮಕ್ಕಳನ್ನು ದೂರವಿರಿಸಬೇಕು. ಗರ್ಭಿಣಿಯರು ಮೊಟ್ಟೆ, ಮಕ್ಕಳಿಗೆ ಪೌಷ್ಟಿಕ ಆಹಾರ, ಕಲಿಕಾ ಸಾಮಗ್ರಿಗಳು ಸೇರಿಯಂತೆ ಎಲ್ಲವನ್ನು ಸುವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಮಕ್ಕಳ ಊಟ, ಗರ್ಭಿಣಿಯರ ಪೌಷ್ಟಿಕ ಆಹಾರ ಸೇರಿದಂತೆ ಅಗತ್ಯ ಸೌಲಭ್ಯಗಳು ಕೊರತೆಯದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವುದು ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಉಪ ನಿಬಂಧಕ ಅರವಿಂದ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ್, ಬೆಳಗಾವಿ ಲೋಕಾಯುಕ್ತ ಅಧೀಕ್ಷಕ ಪ್ರಸನ್ನ ದೇಸಾಯಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:

error: Content is protected !!