Athani

ಅಥಣಿಯಲ್ಲಿ ಅಕ್ರಮ ಸಂಬಂಧದ ಹಿನ್ನೆಲೆ ಯುವಕನ ಕೊಲೆ!!!

Share

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದ್ದ ರಣವೀರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಿಢೀರ್ ಯಶಸ್ಸು ಸಾಧಿಸಿದ್ದಾರೆ. ಅಕ್ರಮ ಸಂಬಂಧದ ಹಸಿಬಿಸಿ ಹಿನ್ನೆಲೆಯಲ್ಲಿ ಶಾಲಾ ಗೆಳೆಯನ ಸಹಾಯದಿಂದಲೇ ಮಹಿಳೆಯೋರ್ವಳು ತನ್ನ ಪ್ರೇಮಿಯನ್ನು ಕೊಲೆ ಮಾಡಿಸಿರುವುದು ತನಿಖೆಯಿಂದ ಬಯಲಾಗಿದೆ.

ಇಂದು ಬೆಳಗಾವಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಳಿಗೇರಿ ಗ್ರಾಮದಲ್ಲಿ ನಡೆದಿದ್ದ ರಣವೀರ ಎಂಬಾತನ ಕೊಲೆ ಪ್ರಕರಣವನ್ನು ಬೆಳಗಾವಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಮೃತ ರಣವೀರನನ್ನು, ಆರೋಪಿ ಶ್ರೀದೇವಿ ತನ್ನ ಹಳೆಯ ಶಾಲಾ ಗೆಳೆಯ ಬೈರು ಶ್ರೀಮಂತ ಪವಾರನೊಂದಿಗೆ ಸೇರಿ ಈ ಕೃತ್ಯಕ್ಕೆ ಸಂಚು ರೂಪಿಸಿದ್ದಾಳೆ. ಸೆಪ್ಟೆಂಬರ್ 21ರಂದು ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಅರಿತು ಬಳ್ಳಿಗೇರಿಗೆ ಬಂದ ಬೈರು ಪವಾರ ರಣವೀರನನ್ನು ಬೈಕ್ ಸ್ಟಾರ್ಟ್ ಆಗುತ್ತಿಲ್ಲ ಎಂದು ಮನೆಯಿಂದ ಹೊರಗೆ ಕರೆಸಿ ಕುತ್ತಿಗೆ ಹಿಚುಕಿ ಬರ್ಬರವಾಗಿ ಕೊಲೆ ಮಾಡಿದ್ದ.
ಪ್ರಕರಣದ ಗಂಭೀರತೆ ಅರಿತ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ. ಬಸರಗಿ ಮತ್ತು ಡಿ ಎಸ್ ಪಿ ಪ್ರಶಾಂತ್ ಮುನ್ನೊಳ್ಳಿ ಅವರ ಮಾರ್ಗದರ್ಶನದಲ್ಲಿ, ಅಥಣಿ ಸಿಪಿಐ ಸಂತೋಷ ಹಳ್ಳೂರ ಹಾಗೂ ಪಿಎಸ್‌ಐ ಗಿರಿಮಲ್ಲಪ್ಪ ಉಪ್ಪಾರ ನೇತೃತ್ವದ ವಿಶೇಷ ತನಿಖಾ ತಂಡವು ಅತ್ಯಂತ ಚಾಕಚಕ್ಯತೆಯಿಂದ ಕಾರ್ಯಾಚರಣೆ ನಡೆಸಿ ತಲೆಮರೆಸಿಕೊಂಡಿದ್ದ ಇಬ್ಬರೂ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ಸಂಕಷ್ಟದ ಪ್ರಕರಣವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಹಿರಿಯ ಅಧಿಕಾರಿಗಳು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

Tags:

error: Content is protected !!