BELAGAVI

ಬೆಳಗಾವಿ ಉತ್ತರದಲ್ಲಿ ₹4.2 ಕೋಟಿ ವೆಚ್ಚದ 2.5 ಕಿ.ಮೀ. ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ

Share

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆಗೆ ಮಹತ್ವದ ಹೆಜ್ಜೆ ಇಡಲಾಗಿದೆ. ಆಝಮ್ ನಗರದಿಂದ ಶಹೂನಗರದವರೆಗಿನ ಪ್ರಮುಖ ರಸ್ತೆಯ ಡಾಂಬರೀಕರಣ ಕಾಮಗಾರಿಗೆ ಶಾಸಕರು ಚಾಲನೆ ನೀಡಿದ್ದಾರೆ. .

ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರು ಯುವ ನಾಯಕ ಅಮಾನ್ ಸೇಠ್ ಅವರೊಂದಿಗೆ ಆಜಂ ನಗರದ ಬಸವಣ್ಣ ದೇವಸ್ಥಾನದಿಂದ ಶಹೂನಗರ ಮುಖ್ಯ ರಸ್ತೆಯ ಕೊನೆಯ ಬಸ್ ನಿಲ್ದಾಣದವರೆಗಿನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದರು. ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಅಂದಾಜು ₹4.2 ಕೋಟಿ ವೆಚ್ಚದಲ್ಲಿ ಸುಮಾರು 2.5 ಕಿಲೋಮೀಟರ್ ಉದ್ದದ ಈ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.

ಆಝಮ್ ನಗರ, ವಿದ್ಯಾಗಿರಿ ಮತ್ತು ಶಾಹೂ ನಗರದ ನಿವಾಸಿಗಳಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಈ ಮಾರ್ಗದ ಕಾಮಗಾರಿ ಪೂರ್ಣಗೊಂಡ ಬಳಿಕ ಸಂಚಾರ ಸುಗಮವಾಗುವುದರ ಜೊತೆಗೆ ರಸ್ತೆ ಸುರಕ್ಷತೆಯೂ ಹೆಚ್ಚಲಿದೆ. ಪ್ರತಿದಿನ ಈ ರಸ್ತೆಯಲ್ಲಿ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದ್ದು, ಉದ್ಘಾಟನಾ ಸಮಾರಂಭದಲ್ಲಿ ಕಾರ್ಪೊರೇಟರ್‌ಗಳು, ಮಹಾನಗರ ಪಾಲಿಕೆ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಭಾಗವಹಿಸಿದ್ದರು.

Tags:

error: Content is protected !!