Dharwad

ಧಾರವಾಡದಲ್ಲಿ ಕೇವಲ 48 ಘಂಟೆಯಲ್ಲಿ ಕಳೆದುಕೊಂಡ 6 ಮೊಬೈಲ್ ಪತ್ತೆ….

Share

ಕಳ್ಳತನ ಹಾಗೂ ಕಳೆದುಹೋಗಿದ್ದ ಆರು ಮೊಬೈಲ್ ಫೋನ್‌ಗಳನ್ನು ಕೇವಲ 48 ಘಂಟೆಯಲ್ಲಿಯೇ ಪತ್ತೆಹಚ್ಚಿ ಮೂಲ ಮಾಲೀಕರಿಗೆ ಮರಳಿ ಹಸ್ತಾಂತರಿಸುವಲ್ಲಿ ವಿದ್ಯಾಗಿರಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಕಾರ್ಯಾಚರಣೆಯನ್ನು ಮಾನ್ಯ ಸಿಪಿಐ ಶಿವಯೋಗಿ ಲೋಹಾರ್ ಅವರ ನೇತೃತ್ವದಲ್ಲಿ ಕೈಗೊಳ್ಳಲಾಗಿತ್ತು. ಕಾರ್ಯಾಚರಣೆಯಲ್ಲಿ ಪತ್ತೆಯಾದ ಆರು ಮೊಬೈಲ್‌ಗಳನ್ನು ಸಂಬಂಧಪಟ್ಟ ಮೂಲ ಮಾಲೀಕರಿಗೆ ಹಸ್ತಾಂತರಿಸಲಾಯಿತು.
ತಮ್ಮ ಕಳೆದುಹೋಗಿದ್ದ ಮೊಬೈಲ್‌ಗಳನ್ನು ಮರಳಿ ಪಡೆದ ಮಾಲೀಕರು ಸಂತಸ ವ್ಯಕ್ತಪಡಿಸಿ, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಧನ್ಯವಾದ ಮತ್ತು ಕೃತಜ್ಞತೆ ಸಲ್ಲಿಸಿದರು.

Tags:

error: Content is protected !!