Vijaypura

ವಿಜಯಪುರದಲ್ಲಿ ವಿಜೃಂಭಣೆಯಿಂದ ಜರುಗಿದ 71ನೇ ಕನ್ನಡ ರಾಜ್ಯೋತ್ಸವ: ಸಚಿವ ಎಂ.ಬಿ.ಪಾಟೀಲ್ ಧ್ವಜಾರೋಹಣ!

Share

ವಿಜಯಪುರ ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ 71 ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಶುಭಾಶಯ ಕೋರಿದರು. ಧ್ವಜಾರೋಹಣದ ನಂತರ ಸಚಿವರು ತೆರೆದ ವಾಹನದಲ್ಲಿ ಸಾಗುವ ಮೂಲಕ ವಿವಿಧ ಪಡೆಯ 17 ಪಥ ಸಂಚಲನ (ಪರೇಡ್) ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು.
ನಂತರ ರಾಜ್ಯೋತ್ಸವ ಸಂಭ್ರಮವನ್ನು ಉದ್ಧೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 30 ಜನ ಸಾಧಕರಿಗೆ ಸನ್ಮಾನ ಮಾಡಲಾಯಿತು…

ಸಮಾರಂಭದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಜಿಲ್ಲಾಧಿಕಾರಿ ಡಾ. ಆನಂದ್ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:

error: Content is protected !!