Accident

ಯು-ಟರ್ನ್ ಲಾರಿಗೆ ಬೈಕ್ ಡಿಕ್ಕಿ!!!

Share

ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿ ನಡೆದಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಮಗಿಮಾವಿನಹಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಕಂಟೇನರ್ ಲಾರಿಯೊಂದು ಏಕಾಏಕಿ ಯು-ಟರ್ನ್ ತೆಗೆದುಕೊಂಡ ವೇಳೆ ಬೈಕ್ ಡಿಕ್ಕಿ ಹೊಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಗುಂಡಾ ಗ್ರಾಮದ 22 ವರ್ಷದ ವಿ. ಅನಿಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೈಕ್ ಹಿಂಬದಿ ಕುಳಿತಿದ್ದ ಶಿವರಾಮ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!