ಹುಬ್ಬಳ್ಳಿಯಲ್ಲಿ ಆಕಸ್ಮಿಕ ಬೆಂಕಿ ಅವಘಡವೊಂದು ಸಂಭವಿಸಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳು ಬೆಂಕಿಗಾಹುತಿಯಾಗಿವೆ.
ಹುಬ್ಬಳ್ಳಿಯ ದಯಾನಂದ ಕಾಲನಿಯಲ್ಲಿ ಭಾರಿ ಅಗ್ನಿ ಅವಘಡವೊಂದು ಸಂಭವಿಸಿದೆ. ಮನೆಯ ಮುಂದೆ ಇಟ್ಟಿದ್ದ ಹತ್ತಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಪಕ್ಕದಲ್ಲೇ ನಿಲ್ಲಿಸಿದ್ದ ಬೈಕ್‌ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಬೆಂಕಿಯ ತೀವ್ರತೆಗೆ ಬೈಕ್‌ಗಳು ಅಸ್ಥಿಪಂಜರದಂತಾಗಿದ್ದು, ಈ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
