Dharwad

ಧಾರವಾಡದಲ್ಲಿ ಸಿಸಿಬಿ ಪೊಲೀಸರಿಂದ ಗಾಂಜಾ ಅಡ್ಡೆ ಮೇಲೆ ದಾಳಿ: ಇಬ್ಬರು ಪೆಡ್ಲರ್‌ಗಳ ಬಂಧನ

Share

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಧಾರವಾಡ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಇಬ್ಬರು ಗಾಂಜಾ ಪೆಡ್ಲರ್‌ಗಳನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.

ಧಾರವಾಡ ಜನ್ನತ್ ನಗರ ಮೂಲದ ವಸೀಂ ಶೇಕ್ (25) ಹಾಗೂ ಅಜೀಜ್ ಗೌಸ್ (26) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರು ಧಾರವಾಡ ಟೋಲ್ ನಾಕಾ ಬಳಿಯ ಜನನಿಬಿಡ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ, ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಬಳಿಕ ತನಿಖೆ ಕೈಗೊಂಡ ನಂತರ ಇವರ ಬಳಿಯಿಂದ 15,365 ರೂಪಾಯಿ ಮೌಲ್ಯದ 175 ಗ್ರಾಂ ಗಾಂಜಾ ಹಾಗೂ 3,010 ರೂಪಾಯಿ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ.

 

ಸದ್ಯ ವಿಚಾರಣೆ ಪೂರ್ಣಗೊಳಿಸಿದ ಪೊಲೀಸರು ಆರೋಪಿಗಳನ್ನು ಜೈಲಿಗೆ ಕಳುಹಿಸಿದ್ದು, ಈ ಕುರಿತು ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!