State

ಕೆಪಿಎಸ್ಸಿ ಪರೀಕ್ಷೆ ಪೂರ್ವಸಿದ್ಧತೆ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಪರಿಶೀಲನಾ ಸಭೆ!

Share

ಸಿಎಂ ಡಿ.ಕೆ. ಶಿವಕುಮಾರ್ ಅವರು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಕೆಪಿಎಸ್ಸಿ ನಡೆಸುತ್ತಿರುವ ಪರೀಕ್ಷೆಗಳ ಪೂರ್ವಸಿದ್ಧತೆ ಕುರಿತು ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನೆ ನಡೆಸಿದರು.

ಗೃಹ ಮತ್ತು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಶ್ಮಿ ಮಹೇಶ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ, ಬೆಂಗಳೂರು ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಕೆ.ಜಿ. ಜಗದೀಶ್, ಖಜಾನೆ ಇಲಾಖೆ ಆಯುಕ್ತರಾದ ಡಾ. ಅರುಂಧತಿ ಚಂದ್ರಶೇಖರ್, ಕೆಪಿಎಸ್ಸಿ ಕಾರ್ಯದರ್ಶಿ ಜ್ಯೋತಿ ಕೆ., ಪರೀಕ್ಷಾ ನಿಯಂತ್ರಕ ಎಚ್. ಪ್ರಸನ್ನ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Tags:

error: Content is protected !!