ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ನಿಟ್ಟಿನಲ್ಲಿ ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರಣಿ ಸಭೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಟೋಕಿಯೊದಲ್ಲಿರುವ ಭಾರತೀಯ ರಾಯಭಾರಿಯನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಟೋಕಿಯೊದಲ್ಲಿ ಜಪಾನ್ಗೆ ಭಾರತದ ರಾಯಭಾರಿಯಾಗಿರುವ ನಗ್ಮಾ ಮೊಹಮ್ಮದ್ ಮಲ್ಲಿಕ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾದರು. ಈ ಸಂದರ್ಭದಲ್ಲಿ ಕರ್ನಾಟಕ ಮತ್ತು ಜಪಾನ್ ನಡುವಿನ ವಾಣಿಜ್ಯ ಸಂಬಂಧ ವೃದ್ಧಿ ಹಾಗೂ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಅವಕಾಶಗಳ ಕುರಿತು ಉಭಯ ನಾಯಕರು ಮಹತ್ವದ ಚರ್ಚೆ ನಡೆಸಿದರು. ಈ ಉನ್ನತ ಮಟ್ಟದ ಭೇಟಿಯ ವೇಳೆ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
