BELAGAVI

ನವಜಾತ ಶಿಶುವಿನ ಮೃತದೇಹ ಬೀದಿ ನಾಯಿಯ ಪಾಲು

Share

 ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದ ಕಾಗವಾಡ ರಸ್ತೆಯ ಪಕ್ಕದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

ರಸ್ತೆ ಬದಿಯಲ್ಲಿ ಬೀದಿ ನಾಯಿಗಳು ಯಾವುದೋ ವಸ್ತುವನ್ನು ಎಳೆದಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪರಿಶೀಲಿಸಿದಾಗ, ನವಜಾತ ಶಿಶುವಿನ ಮೃತದೇಹ ಕಂಡುಬಂದಿದೆ. ನಾಯಿಗಳು ಮೃತದೇಹವನ್ನು ಎಳೆದಾಡಿ ತಿನ್ನುತ್ತಿದ್ದ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ತಕ್ಷಣ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ ಕೂಡಲೇ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Tags:

error: Content is protected !!