Raibag

ಭಕ್ತರ ಪ್ರೀತಿಯ ‘ಧ್ರುವರಾಜ’ ಇನ್ನಿಲ್ಲ…

Share

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಕರಿಸಿದ್ದೇಶ್ವರ ದೇಗುಲದ ಹೆಮ್ಮೆಯ ಆನೆ ‘ಧ್ರುವರಾಜಾ’ ಇಂದು ಬೆಳಗ್ಗೆ ಕೊನೆಯುಸಿರೆಳೆದಿದೆ. ಕಳೆದ 25 ವರ್ಷಗಳಿಂದ ಭಕ್ತರ ಪ್ರೀತಿಗೆ ಪಾತ್ರವಾಗಿದ್ದ ಗಜರಾಜನ ಅಗಲಿಕೆಯಿಂದ ಇಡೀ ಗ್ರಾಮದಲ್ಲಿ ಶೋಕಸಾಗರ ಮಡುಗಟ್ಟಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಕರಿಸಿದ್ದೇಶ್ವರ ಮಠದ ಪ್ರಸಿದ್ಧ ಆನೆ ‘ಧ್ರುವರಾಜಾ’ ಇಂದು ಬೆಳಗ್ಗೆ ಅನಾರೋಗ್ಯದಿಂದ ಮೃತಪಟ್ಟಿದೆ. ಕಳೆದ 25 ವರ್ಷಗಳ ಹಿಂದೆ ಮಠಕ್ಕೆ ತರಲಾಗಿದ್ದ ಧ್ರುವರಾಜಾ, ತನ್ನ ವಿಶೇಷ ಪ್ರೀತಿ ಮತ್ತು ಮಮತೆಯಿಂದ ಸ್ಥಳೀಯರು ಹಾಗೂ ಭಕ್ತರೊಂದಿಗೆ ಅವಿನಾಭಾವ ಬಾಂಧವ್ಯ ಬೆಳೆಸಿಕೊಂಡಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನೆಗೆ ನಿರಂತರ ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಅಲಕನೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಮಾವುತ, ಭಕ್ತರು ಹಾಗೂ ಅಪಾರ ಅಭಿಮಾನಿಗಳು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

Tags:

error: Content is protected !!