ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರು ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ಸಲ್ಲಿಸಿದ್ದಾರೆ. ಗಾಂಧಿ ಕುಟುಂಬದ ಸದಸ್ಯರೊಂದಿಗೆ ಆತ್ಮೀಯವಾಗಿ ಮಾತನಾಡಿದ ಅವರು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.
ನವದೆಹಲಿಯ 5, ಸುನೇಹ್ರಿ ರಸ್ತೆಯಲ್ಲಿರುವ ನಿವಾಸದಲ್ಲಿ ಕಾಂಗ್ರೆಸ್ ಕುಟುಂಬದ ನಾಯಕರಿಗಾಗಿ ಆಯೋಜಿಸಲಾಗಿದ್ದ ‘ದೀಪಾವಳಿ ಮಿಲನ್ – ಹೈ ಟೀ’ ಸಮಾರಂಭದಲ್ಲಿ ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಭಾಗವಹಿಸಿ, ತಮ್ಮ ನೆಚ್ಚಿನ ನಾಯಕ ರಾಹುಲ್ ಗಾಂಧಿ ಅವರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಇದೇ ಸಂದರ್ಭದಲ್ಲಿ ಶ್ರೀಮತಿ ಸೋನಿಯಾ ಗಾಂಧಿ, ಶ್ರೀಮತಿ ಪ್ರಿಯಾಂಕಾ ಗಾಂಧಿ ಹಾಗೂ ಅವರ ಕುಟುಂಬದವರನ್ನು ಭೇಟಿಯಾಗಿ ಆತ್ಮೀಯವಾಗಿ ಸಂವಾದ ನಡೆಸಿದ ಅವರು, ರಾಜಕೀಯ ಹಾಗೂ ಕೆಲಸದ ಆಚೆಗೆ ಗಾಂಧಿ ಕುಟುಂಬದೊಂದಿಗೆ ಬೆರೆತು ಶುಭ ಕೋರಿದ್ದು ಅತ್ಯಂತ ಹೆಮ್ಮೆ ಮತ್ತು ಸಂತೋಷದ ಕ್ಷಣವಾಗಿತ್ತು ಎಂದು ಭಾವನೆಗಳನ್ನು ಹಂಚಿಕೊಂಡಿದ್ದಾರೆ.
