Chikkodi

ನಾಗರಮುನ್ನೂಳಿ ಗ್ರಾಮದಲ್ಲಿ ವಿಜೃಂಭಣೆಯ ಕನಕದಾಸ ಜಯಂತಿ ಆಚರಣೆ

Share

ತಾಲೂಕಿನ ನಾಗರಮುನ್ನೂಳಿ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಭಕ್ತಶ್ರೇಷ್ಠ ಕನಕದಾಸರ ಜಯಂತಿಯನ್ನು ಅತ್ಯಂತ ಸಡಗರ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಪ್ರಾರಂಭದಲ್ಲಿ ಕನಕದಾಸರ ಭಾವಚಿತ್ರವನ್ನು ಅಲಂಕೃತ ಎತ್ತಿನ ಗಾಡಿಯಲ್ಲಿ ಇರಿಸಿ, ಸಕಲ ವಾದ್ಯಮೇಳಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ವಿವಿಧ ಕಲಾತಂಡಗಳ ವಾದ್ಯಮೇಳಗಳು ಮೆರವಣಿಗೆಗೆ ವಿಶೇಷ ಮೆರುಗು ನೀಡಿದವು.

ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕೌವಲಗುಡ್ಡದ ಶ್ರೀಗಳು ಹಾಗೂ ಸಾಹಿತಿಗಳು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾಜಕ್ಕೆ ಕನಕದಾಸರು ನೀಡಿದ ಸಂದೇಶಗಳು ಸಾರ್ವಕಾಲಿಕವಾಗಿವೆ. ಪ್ರತಿಯೊಬ್ಬರೂ ಅವರ ಆದರ್ಶ ಮತ್ತು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಗ್ರಾಮದ ಮುಖಂಡರಾದ ಸಿದ್ದಪ್ಪ ಮರ್ಯಾಯಿ ಮಾತನಾಡಿ, ಗ್ರಾಮಸ್ಥರೆಲ್ಲರೂ ಜಾತ್ಯತೀತವಾಗಿ ಒಗ್ಗೂಡಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸದ ವಿಷಯವಾಗಿದೆ. ವಾದ್ಯಮೇಳಗಳೊಂದಿಗೆ ನಡೆದ ಮೆರವಣಿಗೆಯು ಅತ್ಯಂತ ಆಕರ್ಷಕವಾಗಿ ಮೂಡಿಬಂದಿದೆ,” ಎಂದರು.

ಅರುಣ ಮರ್ಯಾಯಿ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಗ್ರಾಮಸ್ಥರ ಸಹಕಾರದಿಂದ ಕನಕದಾಸ ಜಯಂತಿಯನ್ನು ಯಶಸ್ವಿಯಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶಿವು ಮರ್ಯಾಯಿ, ಸಿದ್ದಪ್ಪ ಮರ್ಯಾಯಿ, ಲಾಡಜಿ ಮುಲ್ತಾನಿ, ಬೀರಪ್ಪ ನಾಗರಾಳೆ, ಅರುಣ ಮರ್ಯಾಯಿ, ಸಂಜು ಕರಟ್ಟಿ, ಸಂಜು ಡೊಣವಾಡೆ, ಲಗಮಣ್ಣಾ ಬಂಬಲವಾಡೆ, ವಿಠ್ಠಲ ಬಂಬಲವಾಡೆ, ಸಿಪು ಮನಗೂಳಿ, ಕುಮಾರ ಈಟಿ ಸೇರಿದಂತೆ ಅನೇಕ ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Tags:

error: Content is protected !!